ಬಿಸಿ ಬಿಸಿ ಸುದ್ದಿ

ಮಹಾತ್ಮ ಗಾಂಧೀಜಿಯವರ, ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮದಿನ ಆಚರಣೆ

ಕೋಲಾರ: ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಗ್ರಾಮದಲ್ಲಿ ಇರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ 116ನೇ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು,

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರಾದ ಸೊಣ್ಣೆಗೌಡ ರವರು ಮತ್ತು ಪ್ರಾಂಶುಪಾಲರಾದ ಸುಬ್ರಮಣ್ಯಂ ರವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರಾದ ಸೊಣ್ಣೆಗೌಡ ರವರು ಮಾತನಾಡಿ ಆಧುನಿಕ ಜಗತ್ತಿನ ನವೀನ ಜೀವನ ಶೈಲಿಯ ಇಂದಿನ ಜನ ತಮ್ಮೆಲ್ಲ ಜಂಜಾಟಗಳಿಗೆ ಪರಿಹಾರ ಹುಡುಕುವಲ್ಲಿ ನೆನೆಯ ಬೇಕಾದ ಪ್ರಾತಃಸ್ಮರಣೀಯರು ಯಾರು ಎಂಬ ಪ್ರಶ್ನೆಗೆ ನಿಸ್ಸಂದೇಹವಾದ ಉತ್ತರ ” ರಾಷ್ಟ್ರಪಿತ ಮಹಾತ್ಮ ಗಾಂಧಿ ” ಶರವೇಗದಲ್ಲಿ ಮುನ್ನುಗ್ಗುತ್ತಿರುವ ತನ್ನೊಳಗೆ ತುಂಬಿಕೊಳ್ಳುತ್ತಿರುವ ದುರಾಸೆ,  ಅಸತ್ಯ,  ಭ್ರಷ್ಟಾಚಾರ,  ಮೋಸ,  ವಂಚನೆ,  ಮೊದಲಾದವುಗಳ ಸುಳಿಯಲ್ಲಿ ಸಿಲುಕಿ ಜಗತ್ತಿನಾದ್ಯಂತ ಎಲ್ಲೆಲ್ಲೂ ಅಶಾಂತಿ ತೋರುತ್ತಿದೆ,  ಜನತೆ ಸ್ವೆಚ್ಟ್ರಚಾರವೆಂಬ ಮಾಯಜಿಂಕೆಯನ್ನು ಬೆನ್ನು ಹತ್ತಿದ್ದಾರೆ ಇಂತಹ ನೂರಾರು ಸಮಸ್ಯೆಗಳಿಗೆ ಇಂದಿಗೂ ಕಾಣುವ ಪರಿಹಾರ ” ಗಾಂಧಿ ಮಾರ್ಗ ” ಆದ್ದರಿಂದಲೇ ಇಂದು ತತ್ವಗಳು ಕೇವಲ ಭಾರತದ ಜನರಿಗಷ್ಟೆ ಅಲ್ಲ ಜಗತ್ತಿನಾದ್ಯಂತ ಕೋಟ್ಯಾಂತರ ಜನರ ಬದುಕಿನ ಆಶಾಕಿರಣವಾಗಿ ಕಾಣುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸುಬ್ರಮಣ್ಯಂ, ಮುಖ್ಯ ಶಿಕ್ಷಕರಾದ ಸೊಣ್ಣೆಗೌಡ, ಶಾಲೆಯ ಶಿಕ್ಷಕರಾದ ಭಾರತಿ, ಹಂಸವೇಣಿ, ಸುಜಾತ, ಸುವರ್ಣ ಕುಮಾರಿ,  ಸೌಮ್ಯ, ಸುಧಾ, ಶಿವರತ್ನಮ್ಮ, ಶಿವಪ್ರಸಾದ್, ರವಿ ಕುಮಾರ್, ಶಿವ ಶಂಕರ್ ರೆಡ್ಡಿ, ನಾರಾಯಣಸ್ವಾಮಿ, ನಂದೀಶ್, ಗೋಪಿನಾಥ್,  ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago