ಕಲಬುರಗಿ: ಕೋವಿಡ್-19 ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸಾದ ಸ್ವಚ್ಛ ಭಾರತ ಅಂಗವಾಗಿ ಪ್ರತಿಯೊಬ್ಬರು ಶ್ರಮದಾನ ಮಾಡುವ ಮೂಲಕ ಸ್ವಚ್ಛತೆಗೆ ಮಹತ್ವ ನೀಡಬೇಕು. ದೇಹ ದಂಡಿಸುವುದಲ್ಲದೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಹೇಳಿದರು.
ಮಹಾತ್ಮ ಗಾಂಧೀಜಿಯವರ 151ನೇ ಜಯಂತೋತ್ಸವ ಅಂಗವಾಗಿ ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಡಿ.ಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸರಳವಾಗಿ ಆಯೋಜಿಸಲಾದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬಾಪುವಿನ ಭಾವಚಿತ್ರಕ್ಕೆ ಪುμÁ್ಪರ್ಚನೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಸ್ವಚ್ಛತೆ ಬಗ್ಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಹೆಚ್ಚಿನ ಗಮನ ಕೊಟ್ಟಿದ್ದರು. ಸ್ವಚ್ಚತೆಯಿದಲ್ಲಿ ದೇವರು ವಾಸಿಸುತ್ತಾನೆ. ಹೀಗಾಗಿ ಎಲ್ಲಾ ಅಧಿಕಾರಿ-ಸಿಬ್ಬಂದಿಗಳು ತಮ್ಮ-ತಮ್ಮ ಕೋಣೆ, ಮನೆ, ಸುತ್ತಮುತ್ತ ಪರಿಸರ ಸ್ಚಚ್ಚವಾಗಿಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ಪೆÇ್ರೀಬೇಷನರ್ ಐ.ಎ.ಎಸ್. ಅಧಿಕಾರಿ ಡಾ.ಆಕಾಶ ಶಂಕರ ಮಾತನಾಡಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನವಾದ ಇಂದು ವಿಶ್ವಸಂಸ್ಥೆ ” ವಿಶ್ವ ಅಹಿಂಸಾ ದಿನಾಚರಣೆ” ಯಾಗಿ ಅಚರಿಸುತ್ತಿರುವುದು ನಾವೆಲ್ಲರು ಹೆಮ್ಮೆ ಪಡುವ ವಿಷಯವಾಗಿದೆ. ದೇಶದ ಪ್ರತಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಾಣುತ್ತೇವೆ. ಗಾಂಧೀಜಿಯವರನ್ನು ಆತ್ಮಸಾಕ್ಷಿಯಾಗಿ ನೋಡಿದರೆ ಅಂವೇಡ್ಕರ್ ಅವರು ನೀಡಿದ ಸಂವಿಧಾನವು ನೀತಿ ನಿಯಮಗಳಡಿ ನಡೆಯಲು ಬೋಧಿಸುತ್ತದೆ ಎಂದರು.
ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಅರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಕೋವಿಡ್ ಸಿಷ್ಡಚಾರದಂತೆ ಅಂತ್ಯ ಸಂಸ್ಕಾರ ಮಾಡುವ ವಾಹನ ಚಾಲಕರು, ಸಹಾಯಕರು, ಗ್ರೂಪ್ ‘ಡಿ’ ಸಿಬ್ಬಂದಿ ಸೇರಿದಂತೆ 19 ಜನರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶ್ರಮದಾನ: ಕಾರ್ಯಕ್ರಮಕ್ಕು ಮುನ್ನ ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಐ.ಎ.ಎಸ್. ಪೆÇ್ರಬೇಷನರ್ ಅಧಿಕಾರಿ ಡಾ.ಆಕಾಶ ಶಂಕರ ಸೇರಿದಂತೆ ಡಿ.ಸಿ. ಕಚೇರಿಯ ಸಿಬ್ಬಂದಿಗಳು ಮಿನಿ ವಿಧಾನಸೌದ ಅವರಣದಲ್ಲಿ ಶ್ರಮದಾನ ಮಾಡಿದರು.