ಕಲಬುರಗಿ: ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ತಡ ರಾತ್ರಿ ಪತಿ ಮತ್ತು ಪತ್ನಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ದಿನಕಿ ತಾಂಡದಲ್ಲಿ ನಡೆದಿದೆ.
ಮಾರುತಿ ದೇವಲ ಜಾಧವ್ (44) ಮತ್ತು ಇವರ ಪತ್ನಿ ಶಾರದಾ ಮಾರುತಿ ಜಾಧವ್ (35) ಅವರನ್ನು ನಿನ್ನೆ ರಾತ್ರಿ ವೇಳೆಯಲ್ಲಿ ಆರೋಪಿಗಳು ಮನೆಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಾರುತಿ ದೇವಲ ಜಾಧವ್ ಅವರು ಕೃಷಿ ಕೆಲಸ ಮಾಡುತ್ತಿದರು ಎಂದು ತಿಳಿದುಬಂದಿದೆ. ಈ ಘಟನೆಯಿಂದ ತಾಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಡಿ.ಎಸ್.ಪಿ ಕಮಲಾಪುರ ಪೊಲೀಸ್ ಠಾಣೆಯ ಸಿಪಿಐ ಶಂಕರ್ ಗೌಡ ಪಾಟೀಲ್, ಪಿ.ಎಸ್.ಐ ಭೀಮರಾಯ ಪಾಟೀಲ್, ಗ್ರಾಮೀಣ ವಿಭಾದ ಪಿಜಿ ದೊಡ್ಡಮನಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಕೊಲೆ ಮಾಡಿ ತಲೆ ಮರಿಸಿಕೊಂಡ ಆರೋಪಿಗಳ ಬಂಧನಕ್ಕೆ ಪೊಲೀಸ್ ಜಾಲ ಬೀಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…