ಬಿಸಿ ಬಿಸಿ ಸುದ್ದಿ

ಉತ್ತರ ಪ್ರದೇಶ ಸರಕಾರ ವಜಕ್ಕೆ ಬಿ.ಎಸ್.ಪಿ ಆಗ್ರಹ

ಕಲಬುರಗಿ: ಇಂದು ಬಹುಜನ ಸಮಾಜ ಪಕ್ಷ ಚಿತ್ತಾಪುರ ಘಟಕದ ವತಿಯಿಂದ ಉತ್ತರ ಪ್ರದೇಶ ರಾಜ್ಯದಲ್ಲಿ ನಿರಂತರ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದು, ಹೆಣ್ಣು ಮಗಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದು ಅಮಾನುಷವಾಗಿ ಕೊಲೆ ಮಾಡಲಾಗಿತ್ತಿರುವುದನ್ನು ಖಂಡಿಸಿ, ಉತ್ತರ ಪ್ರದೇಶ ಸರಕಾರವನ್ನು ವಜಾ ಗೊಳಿಸಬೇಕೆಂದು ಒತ್ತಾಯಿಸಿ ಬಹುಜನ ಸಮಾಜದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಆಗ್ರಹಿಸಿದರು.

ಉತ್ತರ ಪ್ರದೇಶದ ಬಲರಾಂಪೂರ ಮತ್ತು ಇತರೆ ಕಡೆ ಮರಳಿಸುತ್ತಿರುವುದು ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದು, ಪೊಲೀಸರು ಸಹ ಸರ್ಕಾರದ ಕೈ ಗೊಂಬೆ ಆಗಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಕೂಡಲೆ ವಜಾಗೊಳಿಸಿ ಉತ್ತರ ಪ್ರದೇಶದಲ್ಲಿ ರಾಷ್ಟ್ರ ಪತಿ ಆಡಳಿತವನ್ನು ಜಾರಿಗೆ ತರಬೇಕು ಎಂದು ಮುಖಂಡರು ಆಗ್ರಹಿಸದರು.

ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೆ ಸೇವೆಯಿಂದ ವಜಾ ಮಾಡಿ ಬಂಧಿಸಿ, ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ನ್ಯಾಯದಾನ ದೊರೆಯುವಂತೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿ ಚಿತ್ತಾಪುರ ತಹಸಿಲ್ದಾರರ ಮುಖಾಂತರ ಮಾನ್ಯ ಘನವೆತ್ತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಆನಂದ ಮಸ್ಕಿ, ಪ್ರ. ಕಾರ್ಯದರ್ಶಿಯಾದ  ಚಂದ್ರಶೇಖರ್ ಸಾತನೂರ್, ಮುಖಂಡರಾದ ತುಕಾರಾಮ ದಿಗ್ಗಾಂವ್, ದಶರಥ ಸಜ್ಜನ, ಚೇತನ ಸಜ್ಜನ, ಸಿದ್ರಾಮ ಚಿತ್ತಾಪೂರ, ರವಿ ಕಲ್ಲಕ್  ಮತ್ತಿತ್ತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago