ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ನರಸಾಪುರ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ನರಸಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75 ರ ಪಕ್ಕದಲ್ಲಿ ಸುಮಾರು 25 ರಿಂದ 32 ವರ್ಷ ವಯಸ್ಸಿನ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಕೊಲೆಮಾಡಿ ವ್ಯಕ್ತಿಯನ್ನು ನರಸಾಪುರದ ಬಳಿ ಹಾಕಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. 3-4 ದಿನಗಳಿಂದ ಶವ ಅಲ್ಲೇ ಇದ್ದುದ್ದರಿಂದ ಹುಳುಗಳು ಬಿದ್ದು ದುರ್ವಾಸನೆ ಬರುತ್ತಿತ್ತು.
ಮೃತ ವ್ಯಕ್ತಿಯ ಮುಖ ಪತ್ತೆಹಚ್ಚಲು ಸಹ ಆಗದಷ್ಟು ಸುಟ್ಟು ಹೋಗಿದ್ದು, ವ್ಯಕ್ತಿಯ ಗುರುತು ಹಚ್ಚಲು ಕಷ್ಟವಾಗುತ್ತಿದೆ. ಘಟನಾ ಸ್ಥಳಕ್ಕೆ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಶವ ಪರೀಕ್ಷೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್, ಏ ಎಸ್ ಐ ಮಂಜುನಾಥ್, ನರಸಾಪುರ ಏ ಎಸ್ ಐ ಶಿವಪ್ಪ , ಪೊಲೀಸ್ ಸಿಬ್ಬಂದಿಯಾದ ಮರೇಗೌಡ, ನಟರಾಜ್ ಹಾಗೂ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…