ಬೆಂಗಳೂರು: ನಾಗಮಂಗಲ ತಾಲ್ಲೂಕಿನಲ್ಲಿ ಉದ್ದೇಶಿತ ಕೈಗಾರಿಕಾ ಪ್ರದೇಶ ಅಭಿವೃದ್ದಿಗೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೇ ಮಾಡಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಸಚಿವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮ ಸಭೆಯಲ್ಲಿ ಮಾತನಾಡಿ, ನಾಗಮಂಗಲ ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ದಿಗೆ ಭೂಸ್ವಾಧೀಯ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸ್ವಾಧೀನ ಪ್ರಕ್ರಿಯೆಯಲ್ಲಿ ಕೆಲವೊಂದು ಅಭಿವೃದ್ದಿ ಹೊಂದಿರುವ ತೋಟಗಳನ್ನು ನಮೂದಿಸಲಾಗಿದೆ. ಇದನ್ನು ಕೈಬಿಟ್ಟು ಶುಷ್ಕ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕು. ಈ ಭಾಗದಲ್ಲಿ ಕೈಗಾರಿಕೆಗಳ ಬರುವ ಅಗತ್ಯತೆ ಇದೆ. ಆದರೆ, ಕೃಷಿಯಲ್ಲಿ ಅಭಿವೃದ್ದಿ ಹೊಂದಿರುವ ನೀರಾವರಿ ಜಮೀನನ್ನು ಈ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಳ್ಳುವುದು ಬೇಡ ಎಂದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್, ತೋಟಗಳು ಹಾಗೂ ನೀರಾವರಿ ಸೌಲಭ್ಯದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಜಮೀನಿನ ಸ್ವಾಧೀನ ಪ್ರಕ್ರಿಯೆ ಸರಿಯಲ್ಲ. ಆ ಜಾಗವನ್ನು ಬಿಟ್ಟು ಶುಷ್ಕ ಪ್ರದೇಶದ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಬೇಕು ಮತ್ತು ಇನ್ನೊಮ್ಮೆ ಸರ್ವೇ ಕಾರ್ಯವನ್ನು ನಡೆಸಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ನಾಗಮಂಗಲ ಶಾಸಕರಾದ ಸುರೇಶ್ ಗೌಡ, ಮಾಗಡಿ ಶಾಸಕರಾದ ಎ ಮಂಜುನಾಥ್ ಅವರ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಅವಕಾಶ ಇರುವ ಪ್ರದೇಶಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಅಲ್ಲದೆ, ಅಧಿಕಾರಿಗಳನ್ನು ಸರ್ವೇ ಕಾರ್ಯಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದರು.
ಇದಕ್ಕೆ ಸಚಿವರ ಸ್ಪಂದಿಸಿ ಸ್ಥಳದಲ್ಲೆ ಅಧಿಕಾರಿಗಳಿಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀ ಗೌರವ್ ಗುಪ್ತಾ, ಕೆಐಎಡಿಬಿ ಸಿಇಓ ಶಿವಶಂಕರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…