ಉತ್ತರ ಪ್ರದೇಶ ಬಿಜೆಪಿ ಸರಕಾರ ವಜಾಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

0
93

ವಾಡಿ: ಹತ್ರಾಸ್ ದಲಿತ ಯುವತಿ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಡಿಎಸ್ಎಸ್ ಜಿಲ್ಲಾ ಸಂಚಾಲಕ ಶ್ರಾವಣಕುಮಾರ ಮೋಸಲಗಿ ನೇತೃತ್ವದಲ್ಲಿ ನಗರದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್ ಎಸ್  ಕಾರ್ಯಕರ್ತರು ಯುಪಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಇತ್ಯಾದಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರಿಗೆ ಭದ್ರತೆಯ ಇಲ್ಲದಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಅಪರಾಧಗಳ ಸ್ವರ್ಗವಾಗಿ ಉತ್ತರಪ್ರದೇಶ ಮಾರ್ಪಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೂಡಲೇ ಅತ್ಯಾಚಾರಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗುತ್ತಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಜಾಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು, ಪುರಸಭೆ ಸದಸ್ಯರು ಸೇರಿದಂತೆ ಅನೇಕರು ಬೆಂಬಲ ಸೂಚಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here