ವಾಡಿ: ಹತ್ರಾಸ್ ದಲಿತ ಯುವತಿ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಡಿಎಸ್ಎಸ್ ಜಿಲ್ಲಾ ಸಂಚಾಲಕ ಶ್ರಾವಣಕುಮಾರ ಮೋಸಲಗಿ ನೇತೃತ್ವದಲ್ಲಿ ನಗರದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಡಿಎಸ್ ಎಸ್ ಕಾರ್ಯಕರ್ತರು ಯುಪಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಇತ್ಯಾದಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರಿಗೆ ಭದ್ರತೆಯ ಇಲ್ಲದಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಅಪರಾಧಗಳ ಸ್ವರ್ಗವಾಗಿ ಉತ್ತರಪ್ರದೇಶ ಮಾರ್ಪಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೂಡಲೇ ಅತ್ಯಾಚಾರಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗುತ್ತಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಜಾಗೊಳಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು, ಪುರಸಭೆ ಸದಸ್ಯರು ಸೇರಿದಂತೆ ಅನೇಕರು ಬೆಂಬಲ ಸೂಚಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…