ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ ಇವರ ಅಧೀನದಲ್ಲಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಫಾರ್ಮಾಸಿಸ್ಟ್ ಹುದ್ದೆ(ವೇತನ ರೂ.20,000) ಸಂಖ್ಯೆ 10, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ(ವೇತನ ರೂ.15,000) ಸಂಖ್ಯೆ 21 ವೃಂದದ ಹುದ್ದೆಗಳನ್ನು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ಮುಖಾಂತರ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ, ಎಸ್.ಎಸ್.ಹೈಟೆಕ್ ಆಸ್ಪತ್ರೆ ಹತ್ತಿರ ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಹತ್ತಿರ ದಾವಣಗೆರೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು ಅ.08 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣಪತ್ರ ಮೂಲ ಮತ್ತು ನಕಲು ಪ್ರತಿಗಳೊಂದಿಗೆ ಸಿ&ಆರ್ ರನ್ವಯವಾಗುವ ಎಲ್ಲಾ ಪೂರಕ ದಾಖಲೆಗಳೊಂದಿಗೆ ದೃಢೀಕರಿಸಿ ಅರ್ಜಿ ಸಲ್ಲಿಸತಕ್ಕದ್ದು.) ಸಲ್ಲಿಸುವುದು. ಅರ್ಜಿಗಳನ್ನು ಪರಿಶೀಲಿಸಿದ ನಂತರ ಅ.13 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಹೆಚ್.ಎಸ್ ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…