ಮಹಿಳೆಯ, ಮಕ್ಕಳ ಪೋಷಣೆಗಾಗಿ ಮೊಬೈಲ್ : ಬಿ.ವೈ.ರಾಘವೇಂದ್ರ

0
44

ಶಿವಮೊಗ್ಗ: ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು, ಕಿಶೋರಿಯರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಹಾಗೂ ನವಜಾತ ಶಿಶುಗಳ ಪೋಷಣೆ ಮತ್ತು ನಿರಂತರ ಅನುಪಾಲನೆಯ ಸದುದ್ದೇಶದಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಮೊಬೈಲ್‍ಗಳನ್ನು ವಿತರಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಕೇಂದ್ರ ಪುರಸ್ಕøತ ಪೋಷಣೆ ಅಭಿಯಾನ ಯೋಜನೆಯಡಿ ದೇಶದ ಪ್ರಧಾನ ಮಂತ್ರಿಗಳು ರೂಪಿಸಿರುವ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಭಾಗವಾಗಿ ಮೊಬೈಲ್‍ಗಳನ್ನು ವಿತರಿಸಲಾಗುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುವ ಎಲ್ಲಾ ಕಾರ್ಯಕ್ರಮಗಳ ಅನುಪಾಲನೆ ಹಾಗೂ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದವರು ನುಡಿದರು.

Contact Your\'s Advertisement; 9902492681

ಪ್ರಸ್ತುತ ಜಿಲ್ಲೆಯಲ್ಲಿ 2525 ಮೊಬೈಲ್ ಫೋನ್ ಹಂಚಿಕೆಯಾಗಿದ್ದು, ಜಿಲ್ಲೆಯಲ್ಲಿ ಇರುವ 2439 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಹಾಗೂ 86 ಮೇಲ್ವಿಚಾರಕಿಯರಿಗೆ ಶೀರ್ಘದಲ್ಲಿ ನೀಡಲಾಗುವುದು. ಅಲ್ಲದೇ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಶಿಶುಮರಣ ಮತ್ತು ತಾಯಿ ಮರಣ ಪ್ರಮಾಣವನ್ನು ನಿಯಂತ್ರಿಸುವುದು ಕೂಡ ಈ ಕಾರ್ಯಕ್ರಮದ ಭಾಗವಾಗಿರಲಿದೆ ಎಂದ ಅವರು, ಜಿಲ್ಲಾದ್ಯಂತ ಸೀಮಂತ, ಪೌಷ್ಟಿಕ ಆಹಾರ ಶಿಬಿರ, ಅನ್ನಪ್ರಾಶನ, ಸುಪೋಷಣ್ ದಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಸೆಪ್ಟೆಂಬರ್ – 2020ರ ಮಾಹೆಯಲ್ಲಿ ಜಿಲ್ಲಾದ್ಯಂತ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಾಡಲಾಗಿದ್ದು, ಅದರಲ್ಲಿ Sಂಒ ಮಕ್ಕಳ ಗುರುತಿಸುವಿಕೆ, ನ್ಯೂಟ್ರಿ ಗಾರ್ಡನ್, ಪೋಷಣ್ ಪಂಚಾಯತ್, ಪೋಷಣ್ ರಥ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9233 ಚಟುವಟಿಕೆಗಳ ಮುಖೇನ 9,07,267 ಜನರನ್ನು ತಲುಪಿಸುವ ಉದ್ಧೇಶ ಹೊಂದಲಾಗಿದೆ ಎಂದರು.

ಈ ಯೋಜನೆಯನ್ನು ಡಿಜಿಟಲೈಸ್ ಮಾಡಲು ಈ ಮೊಬೈಲ್ ಫೋನ್‍ಗಳಲ್ಲಿ ಅಂS ಅಂಡ್ Sಓಇಊಂ ಂPP ತಂತ್ರಾಂಶವನ್ನು ಅಳವಡಿಸಲಾಗಿರುತ್ತದೆ. ಇದರಿಂದ ಯೋಜನೆಯ ಫಲಾನುಭವಿಗಳಾದ ಮಕ್ಕಳು, ಕಿಶೋರಿಯರು, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರು ಹಾಗೂ ನವಜಾತ ಶಿಶುಗಳಿಗಾಗಿ ಸರ್ಕಾರದಿಂದ ನೀಡುವ ಸೌಲಭ್ಯಗಳು ತಲುಪಿಸಲು ಹಾಗೂ ಅನುಸರಣೆ ಮಾಡಲಾಗುವುದು ಎಂದವರು ನುಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಕೋವಿಡ್‍ನಂತಹ ಸಂದಿಗ್ಧ ಸಂದರ್ಭದಲ್ಲಿಯೂ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಹೃದಯವಂತಿಕೆಯನ್ನು ಕೊಂಡಾಡಿದ ಅವರು, ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ಇನ್ನಷ್ಟು ರಚನಾತ್ಮಕವಾಗಿ, ಪರಿಣಾಮಕಾರಿಯಾಗಿ ನಡೆಯುವಂತಾಗಲು ಮೊಬೈಲ್ ವಿತರಣೆ ಸಹಕಾರಿಯಾಗಲಿದೆ ಎಂದರು.

ಇದೇ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಸಾಂಕೇತಿಕವಾಗಿ ಮೊಬೈಲ್‍ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕ ಕೆ.ಬಿ.ಅಶೋಕನಾಯ್ಕ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here