ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದ ಒಳಗಾಗಿ 164ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಶುಕ್ರವಾರ ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6ಎಕ್ರೆ ಜಮೀನು ಗುರುತಿಸಲಾಗಿದ್ದು, ತಕ್ಷಣ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಪೌರ ಕಾರ್ಮಿಕರಿಗೆ ಮನೆಯನ್ನು ಒದಗಿಸುವ ವಿಶಿಷ್ಟ ಯೋಜನೆ ಇದಾಗಿದ್ದು, ಇಡೀ ರಾಜ್ಯಕ್ಕೆ ಇದು ಮಾದರಿಯಾಗಿದೆ ಎಂದು ಹೇಳಿದರು.
ಮನೆಗಳ ನಿರ್ಮಾಣದಿಂದಾಗಿ ಇಡೀ ಊರನ್ನು ಸ್ವಚ್ಛಗೊಳಿಸುವಂತಹ ಮಹಾನ್ ಕಾಯಕ ಮಾಡುವ ಪೌರಕಾರ್ಮಿಕರಿಗೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಲಿದೆ. ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಗಾಂಧಿ ಜಯಂತಿ ದಿನದಂದು ಪೌರ ಕಾರ್ಮಿಕರ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ಒದಗಿರುವುದು ಅರ್ಥಪೂರ್ಣವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ದಿನ ನಿಜವಾದ ಸ್ವಾತಂತ್ರ್ಯ ಎಂಬ ಗಾಂಧೀಜಿ ಅವರ ನುಡಿ ಇಂದು ಸಾಕಾರವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್‍ಗಳಾದ ಚನ್ನಬಸಪ್ಪ, ನಾಗರಾಜ ಕಂಕಾರಿ, ಯೋಗೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…
ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ.…
ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…
ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…
ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …
ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…