ಪುರಸಭೆ ಅಡಿಯಲ್ಲಿ ಕಳಪೆ ಕಾಮಗಾರಿ: ದೊಡ್ಡಪ್ಪಗೌಡ ಪಾಟೀಲ್ ಆರೋಪ

0
110
  • ರಾಜು ಮುದ್ದಡಗಿ

ಜೇವರ್ಗಿ: ಪುರಸಭೆ ವ್ಯಾಪ್ತಿಯಲ್ಲಿ ಅನೇಕ ಸಮಸ್ಯೆಗಳಿದ್ದರೂ ಸಹ ಇಲ್ಲಿನ ಮುಖ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸರಿಯಾಗಿ ಸ್ಪಂದಿಸುತ್ತಿಲ್ಲ ಹಾಗೂ ಸಾರ್ವಜನಿಕರ ಮೂಲಭೂತ ಸೌಕರ್ಯಗಳ ಕುರಿತು ಸಂಪೂರ್ಣ ನಿರ್ಲಕ್ಷತೆಯನ್ನು ಮುಂದಿರುವುದು ಸರಿಯಲ್ಲ ಎಂದು ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತಿರ ಮಳೆಗೆ ಕೊಚ್ಚಿ ಹೋಗಿರುವ ಬ್ರಿಜ್ಜಿನ ಕಾಮಗಾರಿಯು ಸಂಪೂರ್ಣವಾಗಿದ್ದು ಕಳಪೆ ಮಟ್ಟದ ವಸ್ತುಗಳನ್ನು ಉಪಯೋಗಿಸಿ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಲ್ಲಿದ್ದಾರೆ.  ಸೇತುವೆ ಮತ್ತೆ ಎರಡು ವರ್ಷದಲ್ಲಿ ಬಿದ್ದುಹೋಗುತ್ತದೆ ಇದನ್ನು ಎಲ್ಲ ಅಧಿಕಾರಿಗಳು ಸರಿಯಾಗಿ ಗಮನಿಸಬೇಕು, ಇಲ್ಲದಿದ್ದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ನಗರದ ಬಡಾವಣೆಗಳಲ್ಲಿ ಸರಿಯಾದ ಚರಂಡಿ ಹಾಗೂ ರಸ್ತೆಗಳಿಲ್ಲ ಹಾಗೂ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎಂದು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ನಗರ ಪುರಸಭೆ ಕಾರ್ಯವೈಖರಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here