ಶಹಾಪುರ: ಮೊನ್ನೆ ಸುರಿದ ಧಾರಕಾರ ಮಹಾಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದು 1 ಚೀಲ ಜೋಳ 25 ಕೆ.ಜಿ.ಅಕ್ಕಿ,ಹಾಗೂ ದಿನಬಳಕೆ ವಸ್ತುಗಳು ಮಣ್ಣು ಪಾಲಾಗಿರುವ ಘಟನೆ ತಾಲೂಕಿನ ಸಗರ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಮಲ್ಲಮ್ಮ ಮಹಾಂತಪ್ಪ ಜಗಲಿ ಎಂಬುವವರು ಮನೆ ಕಳೆದುಕೊಂಡ ಬಡ ಕುಟುಂಬದ ಮಹಿಳೆಯಾಗಿದ್ದಾಳೆ ಕೂಲಿನಾಲಿ ಮಾಡಿ ಬದುಕುವ ಮಹಿಳೆಗೆ ಸೂರು ಇಲ್ಲದಂತಾಗಿದೆ.ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಮನೆ ಕಳೆದುಕೊಂಡ ಮಹಿಳೆಗೆ ವಾಸಿಸುವುದಕ್ಕೆ ಸೂರು ಕಲ್ಪಿಸಿ ಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಗರ ಗ್ರಾಮದಲ್ಲಿ ಹಲವಾರು ಬಡವರ ಮನೆಗಳು ಬಿದ್ದಿವೆ ಆದ್ದರಿಂದ ಅವರ ಬದುಕು ಬಹಳ ದುಸ್ತರವಾಗಿದೆ.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೇಖಪಾಲಕರು ಸೇರಿಕೊಂಡು ಕೂಡಲೇ ಸರ್ವೆ ಮಾಡಿ ತಾಲ್ಲೂಕು ಆಡಳಿತಕ್ಕೆ ವರದಿ ಸಲ್ಲಿಸಿ ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸಿ ಕೊಡಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಸಂಘದ ಮುಖಂಡರಾದ ಮಹೇಶಗೌಡ ಸುಬೇದಾರ ಅವರು ತಿಳಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…