ಶಹಾಬಾದ:ತಳವಾರ ಹಾಗೂ ಪರಿವಾರ ಜನಾಂಗದವರಿಗೆ ಎಸ್.ಟಿ ಪ್ರಮಾಣ ಪತ್ರ ನೀಡಲು ತಡೆಹಿಡಿದಿದ ರಾಜ್ಯ ಸರಕಾರದ ಆದೇಶವನ್ನು ಖಂಡಿಸಿ ಹೊನಗುಂಟಾ ಗ್ರಾಮದ ತಳವಾರ ಮತ್ತು ಪರಿವಾರ ಎಸ್ಟಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಗ್ರಾಮದ ಸಿದ್ಧಲಿಂಗೇಶ್ವರ ದೇವಸ್ಥಾನದಿಂದ ಗ್ರಾಪಂ ಕಛೇರಿಯವರೆಗೆ ಪ್ರತಿಭಟನೆ ನಡೆಸಿ ಗ್ರಾಪಂ ಪಿಡಿಓ ರಾಜು ಬಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಮಾರ್ಥಂಡ ಬುರ್ಲಿ, ಕೇಂದ್ರ ಸರಕಾರ ತಳವಾರ ಹಾಗೂ ಪರಿವಾರ ಸಮಾಜದವರಿಗೆ ಎಸ್ಟಿ ಪ್ರಮಾಣ ಪತ್ರ ನೀಡಲು ಈಗಾಗಲೇ ಹೊರಡಿಸಿದ್ದಾರೆ.ಅದರಂತೆ ರಾಜ್ಯ ಸರಕಾರವು ಎಲವು ದಿನಗಳವರೆಗೆ ಎಸ್.ಟಿ ಪ್ರಮಾಣ ಪತ್ರ ನೀಡಿದ್ದಾರೆ.ನಂತರ ಎಸ್.ಟಿ ಪ್ರಮಾಣ ಪತ್ರ ನೀಡಲು ತಡೆಹಿಡಿದಿದ್ದಾರೆ.ಇದರ ಹಿಂದೆ ರಾಜಕೀಯ ಷಡ್ಯಂತ್ರವಿರುವುದು ಎಲ್ಲರಿಗೂ ಗೊತ್ತಿದ್ದ ವಿಷಯ.ಆದರೆ ಇದರಿಂದ ತಳವಾರ ಹಾಗೂ ಪರಿವಾರ ಸಮಾಜದವರಿಗೆ ಅನ್ಯಾಯವಾಗಿದೆ ಎಂದರು.
ಕೊಟ್ಟಿದ್ದು ಕಸಿದುಕೊಳ್ಳುವ ಸರಕಾರ ನೋಡಿದ್ದು ಇದೇ ಮೊದಲ ಬಾರಿ. ರಾಜ್ಯ ಸರಕಾರ ತಳವಾರ ಮತ್ತು ಪರಿವಾರ ಸಮಾಜಕ್ಕೆ ಎಸಗುತ್ತಿರುವ ಅನ್ಯಾಯ.ಕೂಡಲೇ ಎಸ್.ಟಿ ಪ್ರಮಾಣ ಪತ್ರ ನೀಡಲು ಮುಂದಾಗಬೇಕು.ಇಲ್ಲದಿದ್ದರೇ ಮುಂಬರುವ ದಿನಗಳಲ್ಲಿ ನಮ್ಮ ಸಮಾಜದವರು ಬಿಜೆಪಿದವರಿಗೆ ಸರಿಯಾದ ಉತ್ತರ ನೀಡಲಿದ್ದಾರೆ. ಅಲ್ಲದೇ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ, ಶರಣು ಹಲಕರ್ಟಿ, ವಿಶ್ವರಾಜ ಫಿರೋಜಬಾದ,ಶಿವಕುಮಾರ ಕಾರೊಳ್ಳಿ ಮಾತನಾಡಿದರು.
ಕೋಲಿ ಸಮಾಜದ ಅಧ್ಯಕ್ಷ ದೇವೆಂದ್ರ ಕಾರೊಳ್ಳಿ, ಗ್ರಾಪಂ ಮಾಜಿ ಅಧ್ಯಕ್ಷ ಆನಂದ ಕೊಡಸಾ, ಶಿವಕುಮಾರ ಬುರ್ಲಿ, ಭೀಮಣ್ಣ ಗೆಜ್ಜಿ, ರಾಜು ಸಣಮೋ, ಭಾಗಣ್ಣ ಕೊಡಸಾ, ರಾಜು ಆಡಿನ್, ರಾಯಪ್ಪ ಹುರಮುಂಜಿ, ಶಿವಕುಮಾರ ತಳವಾರ,ನಿಂಗಣ್ಣ ಕಾರೊಳ್ಳಿ ಸೇರಿದಂತೆ ಅನೇಕ ಜನರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…