ಬೆಂಗಳೂರು: ಪರ್ಮಿಟ್ ಇಲ್ಲದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 4 ಅಂತರಾಜ್ಯ ಬಸ್‌ಗಳನ್ನು ವಿಶೇಷ ಕಾರ್ಯಾಚರಣೆ ನಡೆಸಿ ಇಂದು ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಅವರ ನೇತೃತ್ವದಲ್ಲಿ ಇಂದು ಹೈದರಬಾದ್ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಇದೇ ವೇಳೆ ನಾಗಾಲ್ಯಾಂಡ್ ಹಾಗೂ ಅರುಣಾಚಲ್ ಪ್ರದೇಶದ ಪರ್ಮೀಟ್ ಹೊಂದಿರುವ ಬಸ್‌ಗಳು ರಾಜ್ಯದಲ್ಲಿ ಸಂಚಾರ ನಡೆಸುತ್ತಿದ್ದನ್ನು ಗಮನಿಸಲಾಯಿತು. ರಾಜ್ಯದ ಪರ್ಮೀಟನ್ನು ಪಡೆಯದೆ ತೆರಿಗೆ ಕಟ್ಟದೆ ಇರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಬಸ್ ಗಳನ್ನು ವಶಕ್ಕೆ ಪಡೆಸಿಕೊಂಡಿದ್ದು ದಾಖಲಾತಿಗಳನ್ನು ಹಾಜರುಪಡಿಸುವಂತೆ ಬಸ್ ಮಾಲೀಕರುಗಳಿಗೆ ನೋಟೀಸ್ ನೀಡಲಾಗಿದೆ. ಅವರು ದಾಖಲಾತಿಗಳನ್ನು ನೀಡಿದ ನಂತರ ಖಚಿತವಾದ ದಂಡದ ಮೊತ್ತದ ತಿಳಿದು ಬರಲಿದೆ ಎಂದು ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಪ್ರಕಾಶ್ ತಿಳಿಸಿದರು.
ಕಾರ್ಯಾಚರಣೆಯಲ್ಲಿ ಯಲಹಂಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಕರಾದ ರಾಜ್‌ಕುಮಾರ್ ಹಾಗೂ ನಿರೀಕ್ಷಕಿಯಾದ ಶ್ರೀಮತಿ ಲಕ್ಷ್ಮೀ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…