ಕಲಬುರಗಿ: ತಾಂಡದಲ್ಲಿ ದಂಪತಿ ಜೋಡಿ ಕೊಲೆ: 5 ಆರೋಪಿಗಳು ಅಂದರ್

ಕಲಬುರಗಿ: ಕಳೆದ ಎರಡು ದಿನಗಳ ಹಿಂದೆ ಕಮಲಾಪುರ ತಾಲೂಕಿನ ದಿನಸಿ (ಕೆ) ತಾಂಡಾದಲ್ಲಿ ಮಧ್ಯರಾತ್ರಿಯಲ್ಲಿ ನಡೆದ ದಂಪತಿಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಪೋಲಿಸರು 5 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾ ಗಿದ್ದಾರೆ.

ಮನೆಯ ಅಂಗಳದಲ್ಲಿ ಮಲಗಿಕೊಂಡಿದ್ದ ಮಾರುತಿ ಜಾಧವ್ (42) ಮತ್ತು ಶಾರದಾಬಾಯಿ (35) ಎಂಬ ದÀಂಪತಿಯನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣವನ್ನು 48 ಗಂಟೆಗಳಲ್ಲಿ ಬೇಧಿಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್ ತಿಳಿಸಿದರು.

ಮುಖ್ಯ ಆರೋಪಿ ಮಹೇಶ ಸೇರಿದಂತೆ ಟೋಬು ಅಲಿಯಾಸ ಸದಾಶಿವ ರಾಠೋಡ, ಸಂತೋಷ ರಾಠೋಡ, ರವಿ ರಾಠೋಡ, ಯೇಸು ರಾಠೋಡ ಎಂಬುವರನ್ನು ಬಂಧಿಸುವುದರೊAದಿಗೆ ಅವರು ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೊಲೆಗೀಡಾದ ದಂಪತಿಯ ಮಗಳಿಗೆ ಟೋಬು ಮತ್ತು ಮಹೇಶ ಚುಡಾಯಿಸಿದ್ದರಿಂದ ಮಾರುತಿ ದೂರು ನೀಡಿದ್ದರು. ಮಹೇಶನು ಆಕೆಯನ್ನು ಪ್ರೀತಿಸುತ್ತಿದ್ದ, ಮದುವೆಯಾಗುವ ವಿಷಯವಾಗಿ ಭಿನ್ನಾಭಿಪ್ರಾಯ ಮೂಡಿದಾಗ ಪೊಕ್ಸೊ ಕಾಯ್ದೆಯಡಿ ಅತ್ಯಾಚಾರ ಕೇಸ್ ದಾಖಲಿಸಿದ್ದರು. ತಾನು ಪ್ರೀತಿಸಿದಾಕೆ ತಿರುಗಿ ಬಿದ್ದದ್ದರಿಂದ ಆಕೆಯನ್ನು ಮುಗಿಸಲು ಮಹೇಶ ಹೊಂಚು ಹಾಕಿದ್ದ ಎನ್ನಲಾಗಿದೆ.

ಬಾಂಬೆಯಲ್ಲಿದ್ದ ಆತ ದಿನಸಿ ತಾಂಡಾದ ಮನೆಗೆ ಮಧ್ಯರಾತ್ರಿ ಬಂದಿದ್ದನ್ನು ಕಂಡ ದಂಪತಿ ಆತನನ್ನು ಹಿಡಿಯಲು ಯತ್ನಿಸಿದಾಗ ಇಬ್ಬರಿಗೂ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ.

ಆರೋಪಿತರನ್ನು ಬಂಧಿಸಲು ಗ್ರಾಮೀಣ ಸಿಪಿಐ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ತಂಡದ ಪಿಎಸ್‌ಐಗಳಾದ ಭೀಮರಾಯ ಪಾಟೀಲ್, ಹುಸೇನಬಾಷಾ, ಕಮಲಾಪುರ ಮತ್ತು ಮಹಾಗಾಂವ ಠಾಣೆಯ ಸಿಬ್ಬಂದಿ ಕುಪೇಂದ್ರ, ರಾಜೇಂದ್ರಕುಮಾರರಡ್ಡಿ, ಕಿಶನ್ ಜಾಧವ, ಗುರುನಾಥ ರಡ್ಡಿ, ಶರಣಬಸಪ್ಪ, ರಮೇಶ, ರಾಜಶೇಖರ, ಅಶೋಕ ಇತರರು ಕೂಡಿಕೊಂಡು ಕಾರ್ಯಾಚರಣೆ ನಡೆಸಿ 48 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು. ಅಲ್ಲದೆ ವಿಶೇಷ ತಂಡದ ಕಾರ್ಯವನ್ನು ಶ್ಲಾಘಿಸಿದರು.

ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಕಮಲಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

emedialine

Recent Posts

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

6 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

11 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

16 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420