ಬಳ್ಳಾರಿ: ಜಿಲ್ಲೆ ಕಂಪ್ಲಿಯಲ್ಲಿ ಉತ್ತರ ಪ್ರದೇಶದ ಹತ್ರಸ್ ನಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಕೃತ್ಯವನ್ನ ಖಂಡಿಸಿ ಸುಮಾರು 200ಕ್ಕೂ ಹೆಚ್ಚು ಯುವಕರು ಪಂಜಿನ ಮೆರವಣಿಗೆ ನಡೆಸಿ ಉತ್ತರ ಪ್ರದೇಶ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯ ನಂತರ ಸ್ಥಳೀಯ ಮಾರ್ಕೆಟ್ ಶಾಲೆಯಿಂದ ಕಂಪ್ಲಿಯ ಪ್ರಮುಖ ರಸ್ತೆಗಳ ಮೂಲಕ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದವರೆಗೆ ಪಂಜಿನ ಮೆರವಣಿಗೆ ಮುಖಾಂತರ ಉತ್ತರ ಪ್ರದೇಶದ ಮುಖ್ಯ ಮಂತ್ರಿ ವಿರುದ್ಧ ಘೋಷಣೆ ಕೂಗುತ್ತಾ ನಗರದ ಪ್ರಮುಖ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಮುಂಬತ್ತಿ ಹಚ್ಚುವ ಮೂಲಕ ಮೌನಾಚರಣೆ ಆಚರಿಸುವ ಮೂಲಕ ಸಂತ್ರಸ್ತರಿಗೆ ಶೃದ್ಧಾಂಜಲಿ ಸಲ್ಲಿಸಿ ಪ್ರತಿಭಟನೆ ಮಾಡಿದರು.
ಈ ಸಂಧರ್ಭದಲ್ಲಿ ಪ್ರತಿಭಟನೆಯ ನೇತೃತ್ವವಹಿಸಿದ್ದ ಗ್ಯಾನಿ ಅವರು ಮಾತನಾಡಿ ದೇಶದಲ್ಲಿ ದಿನೇ ದಿನೇ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಹತ್ಯೆ, ಹಲ್ಲೆ, ಲೈಂಗಿಕ ಕಿರುಕುಳ ಹೆಚ್ಚುತ್ತಿದ್ದು ಇದು ಮಾನವ ಕುಲಕ್ಕೆ ನಾಚಿಕೆ ಗೇಡಿನ ಸಂಗತಿಯಾಗಿದ್ದು, ದಲಿತ ಯುವತಿಯನ್ನು ಅತ್ಯಾಚಾರವೆಸಗಿ ಹತ್ಯೆ ಮಾಡಿದ ಆರೋಪಿಗಳನ್ನ ಸಾರ್ವಜನಿಕವಾಗಿ ಗಲ್ಲಿಗೇರಿಸುವಂತೆ ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಪ್ರಮುಖರಾದ ವೀರೇಶ್. ಬಸವರಾಜ್. ಮನೋಜ್ ಕುಮಾರ್, ಜಮೀರ್. ಮಂಜುನಾಥ್. ಶಶಿ ಹಾಗೂ ಇತರರು ಪಾಲ್ಗೊಂಡಿದ್ದರು.