ಕಲಬುರಗಿ: ಅನೈತಿಕ ಸಂಭಂಧದ ಹಿನ್ನಲೆ ಕಲಬುರಗಿ ತಾಲೂಕಿನ ಬೆಳಗುಂಪಾ ಗ್ರಾಮದಲ್ಲಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಅಡೆಮ್ಮಾ (24) ಹಾಗೂ ಆಕೆಯ ಪ್ರಿಯಕರ ಶಂಕರ್ (40] ಕೊಲೆಯಾದ ದುರ್ದೈವಿಗಳು. ಇಬ್ಬರು ಬೆಳಗುಂಪಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಅನೈತಿಕ ಸಂಬಂಧದ ಹಿನ್ನೆಯಲ್ಲಿ ಇಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆಕೈದಿರುವ ಘಟನೆ ಗ್ರಾಮದಲ್ಲಿ ನಡೆದಿದೆ.
ಇಬ್ಬರಿಗೂ ತಲಾ ಇಬ್ಬರು ಮಕ್ಕಳಿದ್ದು, ಕೊಲೆ ಕೈದ ಆರೋಪಿಯ ಕುರಿತು ಇನ್ನು ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.