ಬಿಸಿ ಬಿಸಿ ಸುದ್ದಿ

ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸರ್ವ ಸನ್ನದ್ಧ: ವಿ.ವಿ.ಜ್ಯೋತ್ಸ್ನಾ

ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ವಿ.ವಿ.ಜ್ಯೋತ್ಸ್ನಾ ಹೇಳಿದರು.

ಮಂಗಳವಾರ ಅವರು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ವಿವರಿಸಲು ಪತ್ರಿಕಾಗೋಷ್ಠಿ ನಡೆಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ನಗದಾಗಿ ೫೦ ಸಾವಿರ ರೂ. ಕ್ಕಿಂತ ಹೆಚ್ಚಿನ ಹಣ ಇಟ್ಟುಕೊಳ್ಳುವಂತಿಲ್ಲ. ಒಂದು ವೇಳೆ ಹೆಚ್ಚು ಹಣ ಇಟ್ಟುಕೊಂಡಿದಲ್ಲಿ ಅದಕ್ಕೆ ಸೂಕ್ತ ದಾಖಲಾತಿಗಳನ್ನು ಒದಗಿಸಬೇಕು ಎಂದು ವಿ.ವಿ.ಜ್ಯೋತ್ಸ್ನಾ ಹೇಳಿದರು.

ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣಾ ಖರ್ಚಿಗೆ ಯಾವುದೇ ಮಿತಿ ಇಲ್ಲ ಎಂದು ಸ್ಪಷ್ಠಪಡಿಸಿದ ಜಿಲ್ಲಾಧಿಕಾರಿಗಳು ಇತರೆ ಚುನಾವಣೆಗಳಂತೆ ಮಾದರಿ ನೀತಿ ಸಂಹಿತೆ ಇಲ್ಲಿಯೂ ಅನ್ವಯವಾಗಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಶಾಂತಿ ರೀತಿಯ ಚುನಾವಣೆಗೆ ಸಹಕರಿಸಬೇಕು ಎಂದು ವಿ.ವಿ.ಜ್ಯೋತ್ಸ್ನಾ ಅವರು ಮನವಿ ಮಾಡಿದರು.

ಪ್ರಸ್ತುತ ಕೋವಿಡ್-೧೯ ಇರುವ ಹಿನ್ನೆಲೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮನೆ-ಮನೆ ಭೇಟಿ ಸಂದರ್ಭದಲ್ಲಿ ೫ಕ್ಕಿಂತ ಹೆಚ್ಚಿನ ಜನರು ಇರಬರಾದು. ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಡ್ಡಾಯ ಎಂದರು.

ದಿ.೧೬-೦೧-೨೦೨೦ ರಂದು ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ ೭೩೨೯ ಮತದಾರರಿದ್ದು, ಇದರಲ್ಲಿ ೪೩೩೩ ಪುರುಷರು ಮತ್ತು ೨೯೯೬ ಮಹಿಳೆಯರು ಇದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಲು ಅರ್ಹರಿರುವ ಮತದಾರರು ಅಕ್ಟೋಬರ್ ೮ರ ಮಧ್ಯಾಹ್ನ ೩ ಗಂಟೆ ವರೆಗೆ ನಮೂನೆ ೧೯ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಮತದಾನಕ್ಕೆ ೪೧ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮತದಾನ ಕಾರ್ಯಕ್ಕಾಗಿ ೪೧ ಜನ ಪಿ.ಆರ್.ಓ, ೪೧ ಏ.ಪಿ.ಆರ್.ಓ. ಹಾಗೂ ೮೨ ಜನ ಪೊಲಿಂಗ್ ಸಿಬ್ಬಂದಿ ಸೇರಿದಂತೆ ಒಟ್ಟಾರೆ ೧೬೪ ಜನರನ್ನು ನಿಯೋಜಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರ ಇರಲಿದೆ ಎಂದರು.
೬೪ ತಂಡ ರಚನೆ: ಚುನಾವಣಾ ಅಕ್ರಮ ತಡೆಯಲು ಮತ್ತು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ೧೩ ಎಫ್.ಎಸ್.ಟಿ. ತಂಡ, ೧೩ ವಿ.ಎಸ್.ಟಿ. ತಂಡ, ೧೩ ವಿ.ವಿ.ಟಿ ತಂಡ, ೧೭ ಜನ ಸೆಕ್ಷನ್ ಅಧಿಕಾರಿಗಳು ಹಾಗೂ ೮ ದೂರು ಕೇಂದ್ರ ಸೇರಿದಂತೆ ಒಟ್ಟಾರೆ ೬೪ ತಂಡಗಳನ್ನು ರಚಿಸಲಾಗಿದೆ ಎಂದು ಡಿ.ಸಿ. ವಿ.ವಿ.ಜ್ಯೋತ್ಸ್ನಾ ತಿಳಿಸಿದರು.

ಏಕಗವಾಕ್ಷಿ ವ್ಯವಸ್ಥೆ: ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಸಭೆ-ಸಮಾರಂಭ, ವಾಹನ ಬಳಕೆಗೆ ಅನುಮತಿ ಪಡೆಯಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಕೇಂದ್ರ ತೆರೆದು ಸಿಬ್ಬಂದಿಗಳನ್ನು ನೇಮಿಸಿದ್ದು, ಇಲ್ಲಿ ಅನುಮತಿ ಪಡೆಯಬಹುದಾಗಿದೆ.

ಸಹಾಯವಾಣಿ ಸ್ಥಾಪನೆ: ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರು ಮತ್ತು ಕುಂದುಕೊರತೆಗಳಿಗಾಗಿ ಸಹಾಯವಾಣಿ ೦೮೪೭೨-೨೭೮೬೦೨ ಸ್ಥಾಪಿಸಲಾಗಿದೆ.

ಕೊರೋನಾ ಸೋಂಕಿತರಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ: ಕೋವಿಡ್-೧೯ ಸೊಂಕಿತರಿಗೆ, ಹೋಂ ಕ್ವಾರಂಟೈನ್‌ದಲ್ಲಿದ್ದವರಿಗೆ ಹಾಗೂ ವಿಕಲಚೇತನರಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ಸಿಮಿ ಮರಿಯಮ್ ಜಾರ್ಜ್, ಡಿ.ಸಿ.ಪಿ. ಕಿಶೋರ ಬಾಬು, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago