ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಟೆಂಡರಗಳಲ್ಲಿ ಅವ್ಯವಹಾರದಲ್ಲಿ ಶಾಮಿಲಾಗಿರುವ ಅಧಿಕಾರಿಗಳು ಹಾಗೂ ಇರ್ನೇಸ್ಟ್ ಆಂಡ್ ಯೇಂಗ್ ಕಂಪನಿಯ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಮತ ಕ್ಷೇತ್ರದ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಎಸ್.ಸಾರವಾಡ ತಿಳಿಸಿದ್ದಾರೆ.
ಮನವಿ ಸಲ್ಲಿಸಿ ಮಾತನಾಡಿದ ಅವರು, ಹಿಂದೂಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಅಭಿವೃದ್ದಿ ಪಡಿಸುವ ಉದ್ದೇಶದಿಂದ ಸರಕಾರವು ಮಂಡಳಿಯನ್ನು ರಚಿಸಿ, ಹಿಂದೂಳಿದ ಪ್ರದೇಶವೆಂಬ ಹಣೆ ಪಟ್ಟಿಯನ್ನು ಹೊಗಲಾಡಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ವಾರ್ಷಿಕ ಕೊಟ್ಯಾಂತರ ರೂಪಾಯಿ ವಾರ್ಷಿಕ ಅನುದಾನ ನೀಡುತ್ತಿದೆ. ವಿಪರ್ಯಾಸವೆನೆಂದರೆ ಕೆಲ ಅಧಿಕಾರಿಗಳು ಸ್ವಹಿತಾಸಕ್ತಿಯಿಂದ ಬೇಜ್ವದಾರಿ ತನದಿಂದ ಅಭಿವೃದ್ದಿ ಕಾಮಗಾರಿಗಳು ಸಂಪೂರ್ಣ ನೆಲಕಚ್ಚಿದೆ ಎಂದು ಹೇಳಿದರು.
ಯಾವುದೇ ಕಾಮಗಾರಿ ಡೆಂಡರ್ ಕರೆಯುವಾಗ ಪ್ರಚಲಿತ ದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದು ನಿಯಮ ಹಾಗೂ ಟೆಂಡರ ವೆಬ್‌ಸೈಟ್‌ನಲ್ಲಿ ಸಂಬಂಧ ಪಟ್ಟ ಮಾಹಿತಿ ನೀಡಬೇಕೆಂಬ ನಿಯಮವಿರುತ್ತದೆ ಇಲ್ಲಿನ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಯಾವುದೇ ಪತ್ರಿಕೆಗಳಲ್ಲಿ ಜಾಹೀರಾತು ನೀಡದೇ ಕೆಟಿಟಿಪಿ ಕಾಯ್ದೆ ನಿಯಮವನ್ನು ಗಾಳಿಗೆ ತೂರಿರುತ್ತಾರೆ ಎಂದು ಹೇಳಿದರು.
ಇರ್ನೇಸ್ಟ್ ಆಂಡ್ ಯೇಂಗ್ ಕಂಪನಿಯು ಮೂಲಃತ ಲೇಕ್ಕ ಪರಿಶೋಧನ ಕಂಪನಿಯಾಗಿದ್ದು, ಮತ್ತು ವಿದೇಶಿ ಮೂಲದ ಕಂಪನಿಯಾಗಿದ್ದು, ಅದಕ್ಕೆ ಪಿಎಸ್‌ಓ ತರಹದ ಕಾಮಗಾರಿ ಮಾಡಿರುವ ಯಾವುದೇ ಹಿನ್ನಲೆ ಇರುವುದಿಲ್ಲ. ಮತ್ತು ೩೭೧ (ಜೆ) ನ ಪ್ರಕಾರ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಒಳಪಟ್ಟಿರುವ ಪ್ರದೇಶದ ಸಂಸ್ಥೆಗಳಿಗೆ ಮೊದಲ ಆಧ್ಯತೆಯನ್ನು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದರು.
ಕೋವಿಡ್-೧೯ ಎಂಬ ಮಹಾಮಾರಿ ರೋಗ ದೇಶದಲ್ಲಿ ತಾಂಡವಾಡುತ್ತಿರುವ ಈ ಸಮಯದಲ್ಲಿ ಅಧಿಕಾರಿಗಳು ತಮ್ಮ ಅನುಕೂಲಕ್ಕಾಗಿ ಮತ್ತು ದುಡ್ಡಿನ ಆಮಿಶ್ಯೆಗೆ ಒಳಗಾಗಿ ಅಭಿವೃದ್ದಿ ಮಂಡಳಿಯ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಅಭಿವೃದ್ದಿ ಕಾಣುವುದೆ ಹೇಗೆ ಎಂದರು.
ಇರ್ನೇಸ್ಟ್ ಆಂಡ್ ಯೇಂಗ್ ಕಂಪನಿಗೆ ೯ ಕೋಟಿ ರೂಪಾಯಿಗಳ ದೊಡ್ಡ ಮೊತ್ತದ ಟೆಂಡರ್ ಅನ್ನು ನೀಡಿ ಅದರಲ್ಲಿ ಕೆಲ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಶಾಮಿಲಾಗಿ ಸರಕಾರದ ಕೊಟ್ಯಾಂತರ ರೂಪಾಯಿಗಳನ್ನು ಲೂಟಿ ಮಾಡಿವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದರು.
ಇರ್ನೇಸ್ಟ್ ಆಂಡ್ ಯೇಂಗ್ ಕಂಪನಿಯ ವಿರುದ್ದ ಕ್ರಮ ಕೈಗೊಳ್ಳಬೇಕು ಹಾಗೂ ಶಾಮೀಲಾಗಿರುವ ಅಧಿಕಾರಿಗಳನ್ನು ಕೂಡಲೇ ವಜಾಗೊಳಿಸದ್ದಿದ್ದರೆ ಅನಿವಾರ್ಯವಾಗಿ ರಸ್ತೆಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಲ್ಲಿಕಾರ್ಜುನ್ ಸಾರವಾಡ ಹಾಗೂ ಸಿದ್ದಲಿಂಗ ರಾಠೋಡ್ ಜಂಟಿಯಾಗಿ ತಿಲಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…