ಕಲಬುರಗಿ: ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಕಲಬುರಗಿ ಜಿಲ್ಲಾ ನಗರ ಮತ್ತು ತಾಲ್ಲುಕು ಮಟ್ಟಗಳ ಪದಾಧಿಕಾರಿಗಳ ಸಭೆ ರಾಜ್ಯಾಧ್ಯಕ್ಷರಾದ ಪಿ.ಅಭಿಷೆಕ್ ನೇತೃತ್ವದಲ್ಲಿ ನಗರದ ಕಲಾ ಮಂಡಳದಲ್ಲಿ ನಡೆಯಿತು.
ಸಭೆಯನ್ನು ಉದ್ದೆಶಿಸಿ ಪಿ ಅಭಿಷೇಕ್ ಅವರು ಬೃಷ್ಟಾಚಾರ ನಿರ್ಮೂಲನೆ ರಸ್ತೆ ದುರಸ್ಥಿಗಳ ಬಗ್ಗೆ ಮಹಾನಗರ ಪಾಲಿಕೆ ನಿತ್ಯವೂ ನೀರು ಪೂರೈಸುವುದರ ಬಗ್ಗೆ ಸಂಸ್ಥೆ ಸಂಘಟನೆಯ ಬಗ್ಗೆ ಮಾತನಾಡಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಾಲಾ ಕಣ್ಣಿ ಮಾತನಾಡಿ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಶೋಷಣೆ ಬಗ್ಗೆ ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಮತ್ತು ಎಂದು ಹೇಳಿದರು.
ಸಂದೀಪ್ ಹತ್ತಿ ಕೊಗನೂರ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡ ಕಾರ್ಯಕಾರಿಣಿ ಸದಸ್ಯರೆಲ್ಲರಿಗೂ ಸಂಸ್ಥೆಯ ಹೆಸರಿನ ಗುರುತಿನ ಚೀಟಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ ಪಿ ಅಭಿಷೇಕ್ ಅವರನ್ನು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಾಲಾ ಎಸ್ ಐ ದಣ್ಣೂರ್ ಸನ್ಮಾನಿಸುವ ಮೂಲಕ ಕಾರ್ಯಕ್ರಮಕ್ಕೆ ಬರಮಾಡಿಕೊಂಡರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದಿಪ್ ಹತ್ತಿ ಕೊಗನೂರ್, ಜಿಲ್ಲಾಧ್ಯಕ್ಷ ಬಸವರಾಜ್ ಪಾಟೀಲ್ ಹಾವನೂರ್, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಮಾಲಾ ಕಣ್ಣಿ ,ಪ್ರಧಾನ ಕಾರ್ಯದರ್ಶಿ ಮಾಲಾ ಎಸ್ ಐ ದಣ್ಣೂರ್, ಜಿಲ್ಲಾ ಉಪಾಧ್ಯಕ್ಷ ಸಕರೆಪ್ಪ ಗೌಡ ಪಾಟೀಲ್, ನಗರ ಅಧ್ಯಕ್ಷ ಪ್ರಜೋತ್ ಕದಮ್, ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಪದಾಧಿಕಾರಿಗಳು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನೀರುಪಣೆಯನ್ನು ಶ್ರಿಧರ್ ನಗನಹಳ್ಳಿ ಅವರು ನಡೆಸಿಕೊಟ್ಟರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…