ಬಿಸಿ ಬಿಸಿ ಸುದ್ದಿ

ಗ್ರಾಮ ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕ.ರ.ವೇ ಅಧ್ಯಕ್ಷರ ಆರೋಪ

ಆಳಂದ: ತಾಲೂಕಿನ ನಿಂಬರ್ಗಾ ಗ್ರಾಮ ಪಂಚಾಯತನ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯತ ಹಲವಾರು ವರ್ಷಗಳಿಂದ ಇದ್ದರು ಸಹಿತ ಇದುವರೆಗೆ ಒಂದೇ ಒಂದು ಈ ಬಡಾವಣೆಯಲ್ಲಿ ಸಿಸಿ ರಸ್ತೆಗಲಿಲ್ಲ,ಚರಂಡಿ ನೀರು ಎಲ್ಲಿ ಬೇಕೆಂದರಲ್ಲಿ ನಿಂತು ಅನೇಕ ಸಾಂಕ್ರಾಮಿಕ ರೋಗಗಳಿಗೆ ಸಾರ್ವಜನಿಕರು ತುತ್ತಾಗುತ್ತಿದ್ದಾರೆ ಎಂದು ಕ.ರ.ವೇ ಅಧ್ಯಕ್ಷರಾದ ಬಸವರಾಜ ಯಳಸಂಗಿ ತಿಳಿಸಿದ್ದಾರೆ.

ಅನೇಕ ಚಿಕ್ಕ ಮಕ್ಕಳು ಹಾಗೂ ವಯೋವೃದ್ದರು ಜಾರಿ ಬಿದ್ದು ಗಾಯಗಳಾದ ಘಟನೆಗಳಂತೂ ಇಲ್ಲಿ ಸಹಜವಾಗಿ ಹೋಗಿದೆ. ರೈತಾಪಿ ವರ್ಗದ ಧನ-ಕರುಗಳು ಚರಂಡಿ ನಿರಲ್ಲೇ ನಿಂತು ಅನೇಕ ರೋಗಕ್ಕೆ ತುತ್ತಾಗುತ್ತಿವೆ.ಗಿಡ-ಕಂಟಿಗಳಂತೂ ರಸ್ತೆಗೆ ಹಾದುಕೊಂಡಿವೆ. ಮಹಿಳೆಯರಿಗೆ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಕಂಭಗಳಿಗೆ ಬಲ್ಪ ಗಲಿಲ್ಲ.ದೇಶದ ಪ್ರತಿ ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕೋಟ್ಯಾಂತರ ರೂಪಾಯಿ ವ್ಯಯ ಮಾಡುತ್ತಿವೆ,ಆದರೆ ಗ್ರಾಮೀಣ ಪ್ರದೇಶಗಳು ಮಾತ್ರ ಅಭಿವೃದ್ಧಿಯಿಂದ ವಂಚಿತವಾಗಿವೆ ಎಂದರು

ಇದಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಮನವಿ ಮಾಡಳು ಗ್ರಾಮ ಪಂಚಾಯತಗೆ ಹೋದರೆ ಅಭಿವೃದ್ಧಿ ಅಧಿಕಾರಿ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಂದು ತಿಂಗಳ ಹಿಂದೆ ಕರ್ನಾಟಕ ರಕ್ಷಣಾ ವೇದಿಕೆ ಈ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಸಿತ್ತು, ಅಲ್ಲದೆ ಸಂಬಂಧಪಟ್ಟ ತಾಲೂಕಿನ ಅಧಿಕಾರಿಗಲಿಗೂ ಈ ವಿಷಯದ ಬಗ್ಗೆ ತಿಳಿಸಿತು, ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ ಅಧಿಕಾರಿಗಳು ಕೇವಲ ಒಂದು ರಸ್ತೆಗೆ ಮುರುಮ್(ಖಟುಕ)ಹೊಡೆಸಿದ್ದಾರೆ. ಇನ್ನುಳಿದ ಯಾವುದೇ ಸಮಸ್ಯೆಗಳಿಗೆ ಮುತುವರ್ಜಿ ವಹಿಸದೇ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದು,ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆ ಹರಿಸದೇ ಹೋದಲ್ಲಿ ಸಾರ್ವಜನಿಕರೊಂದಿಗೆ ಗ್ರಾಮ ಪಂಚಾಯತಗೆ ಭೀಗ ಜಡಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಸವರಾಜ ಯಳಸಂಗಿ ಎಚ್ಚರಿಕೆ ನೀಡಿದ್ದಾರೆ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago