ಬಿಸಿ ಬಿಸಿ ಸುದ್ದಿ

ದಾವಣಗೆರೆ: ತುರ್ತು ಸೇವೆಗೆ ಒಂದೇ ಸಂಖ್ಯೆ 112: ಎಸ್‍ಪಿ ಹನುಮಂತರಾಯ

ದಾವಣಗೆರೆ: ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂಜನೆಗಾಗಿ “ತುರ್ತು ಸ್ಪಂದನ ವ್ಯವಸ್ಥೆ-112” ಎಂಬ ಹೊಸ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಪೊಲೀಸ್, ಅಗ್ನಿ ಶಾಮಕ, ಆಂಬುಲೆನ್ಸ್‍ಗಾಗಿ ಬೇರೆ ಬೇರೆ ಸಹಾಯವಾಣಿಗೆ ಕರೆ ಮಾಡುವ ಅಗತ್ಯವಿಲ್ಲ, ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು ಈ ಎಲ್ಲಾ ಸಮಸ್ಯೆಗಳಿಗೂ ತುರ್ತು ಸೇವೆ ನಿಮಗೆ ಲಭಿಸಲಿದೆ ಎಂದು ಎಸ್‍ಪಿ ಹನುಮಂತರಾಯ ತಿಳಿಸಿದರು.

ಈ ಸೇವೆ ಕುರಿತು ಮಾಹಿತಿ ನೀಡಲು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ಸೇವೆಯು ಅಕ್ಟೋಬರ್ 01 ರಿಂದ ಜಿಲ್ಲೆಯಲ್ಲಿ ಆರಂಭಗೊಂಡಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಸಹಾಯವಾಣಿ ಜಾರಿಯಾಗಿದ್ದು ಇದರಲ್ಲಿ ದಾವಣಗೆರೆ ಜಿಲ್ಲೆಯೂ ಒಳಗೊಂಡಿದೆ.

ಅಗ್ನಿ ಶಾಮಕ ದಳದ ನೆರವು/ಆಂಬುಲೆನ್ಸ್ ನೆರವು/ಪೊಲೀಸ್ ನೇರವು ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು (ಇಖSS) ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ ವ್ಯವಸ್ಥೆಯಡಿ ಜಿಲ್ಲೆಯ ಎಲ್ಲಿದಂಲೇ ಕರೆ ಬಂದರೂ ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ

112 ಕ್ಕೆ ಕರೆ ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕೀಕೃತ ತರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15 ನಿಮಿಷದಲ್ಲಿಯೇ ಇಆರ್‍ಎಸ್‍ಎಸ್ ವಾಹನ ಅಲ್ಲಿಗೆ ತಲುಪಿ ಸಂಕಷ್ಟದಲ್ಲಿರುವವರಿಗೆ ತುರ್ತು ನೆರವಾಗುವ ವ್ಯವಸ್ಥೆ ಇದಾಗಿದೆ.

ಇಲಾಖೆಯಿಂದ ದಾವಣಗೆರೆ ಜಿಲ್ಲೆಗೆ ಈ ಉದ್ದೇಶಕ್ಕಾಗಿಯೇ 13 ಬೀಟ್ ವಾಹನ ಪೂರೈಸಲಾಗಿದೆ. ಒಂದು ವಾಹನದಲ್ಲಿ ಎಎಸ್‍ಐ, ಕಾನ್ಸ್‍ಟೇಬಲ್, ಚಾಲಕ ಸೇರಿ ಮೂರು ಸಿಬ್ಬಂದಿಗಳಿರುತ್ತಾರೆ. ಸಂರಕ್ಷಣಾ ಸಲಕರಣೆಗಳು ಇಆರ್‍ಎಸ್‍ಎಸ್ ವಾಹನದಲ್ಲಿರುತ್ತವೆ. 24×7 ತುರ್ತು ಸ್ಪಂದನಾ ಕರ್ತವ್ಯಕ್ಕೆ ಈಗಾಗಲೇ 65 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ 26 ಚಾಲಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ದಿನದ 24 ತಾಸು ಪ್ರಾಯೋಗಿಕವಾಗಿ ಚಟುವಟಿಕೆ ಪ್ರಾರಂಭವಾಗಿದೆ.

ಇನ್ನು ಮುಂದೆ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಮ್-100, ಅಗ್ನಿಶಾಮಕದ-101, ಆರೋಗ್ಯ ಇಲಾಖೆಯ-108 ಸಹಾಯವಾಣಿ ಸಂಖ್ಯೆಗಳು ನೂತನ ಸಹಾಯವಾಣಿ ಸಂಖ್ಯೆ 112 ರಲ್ಲಿ ವಿಲೀನವಾಗಿದೆ.

ಆ್ಯಪ್ ಕೂಡ ಲಭ್ಯ: 112 ತುರ್ತು ಸಹಾಯವಾಣಿ ನೆರವು ಪಡೆಯಲು ನೇರ ಕರೆ ಮಾಡಬಹುದು ಅಥವಾ ಗೂಗಲ್ ಪ್ಲೇ ಸ್ಟೋರ್ ಮತ್ತು ಐಓಎಸ್ ಆ್ಯಪ್ ಸ್ಟೋರ್‍ನಲ್ಲಿ ಕೆಪಿಎಸ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago