ಬಿಸಿ ಬಿಸಿ ಸುದ್ದಿ

ಮಾಸ್ಕ್ ಧರಿಸದವರಿಗೆ ಕೊರೊನಾ ತಪಾಸಣೆ, ದಂಡ ; ಡಿಸಿ ನೇತೃತ್ವದಲ್ಲಿ ಕಾರ್ಯಾಚರಣೆ

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬ ಸಾರ್ವಜನಿಕರು ಮಾಸ್ಕ್ ಧರಿಸುವುದು, ಶಾರೀರಿಕ ಅಂತರ ಕಾಪಾಡಿಕೊಳ್ಳುವುದು, ಸಾಬೂನಿನಿಂದ ಕೈತೊಳೆಯುವುದು ಸೇರಿದಂತೆ ಮುಂತಾದ ಕೊರೊನಾ ತಡೆಗಟ್ಟುವ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಗರದ ವಿವಿಧೆಡೆ ಮಾಸ್ಕ್ ಧರಿಸದವರಿಗೆ ದಂಡ, ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭವಾಯಿತು.

ಸಿಬಿಟಿ, ಅಕ್ಕಿಪೇಟೆ, ಸುಭಾಷ್ ರಸ್ತೆ, ಗಾಂಧಿಚೌಕ, ವಿವೇಕಾನಂದ ವೃತ್ತ, ಮಾರುಕಟ್ಟೆ ಮತ್ತಿತರ ಸ್ಥಳಗಳಲ್ಲಿ ಇಂದು ಬೆಳಿಗ್ಗೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಸಾರ್ವಜನಿಕರನ್ನು ಗುರುತಿಸಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆಯಲ್ಲಿ ಸ್ವತ: ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಸಿ. ಸತೀಶ್, ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ ಮೊದಲಾದ ಹಿರಿಯ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದರ ಮಹತ್ವ ಮನವರಿಕೆ ಮಾಡಿಕೊಟ್ಟರು. ಹಾಗೂ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ವಾಹನ ಸವಾರರು, ಆಟೋ, ಮ್ಯಾಕ್ಸಿಕ್ಯಾಬ್ ಚಾಲಕರು, ಪ್ರಯಾಣಿಕರನ್ನು ಸಂಚಾರಿ ಸ್ವ್ಯಾಬ್ ಸಂಗ್ರಹಣಾ ಕೇಂದ್ರಕ್ಕೆ ಕರೆತಂದು ಕೋವಿಡ್ ತಪಾಸಣೆಗೆ ಒಳಪಡಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಕೋವಿಡ್ ನಿಯಂತ್ರಣ ಜಾಗೃತಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರತಿದಿನ ಸುಮಾರು 500 ರಿಂದ 600 ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಲಾಗುತ್ತಿದೆ. ಇದುವರೆಗೆ ಸುಮಾರು 35 ಲಕ್ಷ ರೂ.ಗಳಿಗೂ ಅಧಿಕ ದಂಡ ಸಂಗ್ರಹವಾಗಿದೆ. ಕೊರೊನಾಗೆ ಲಸಿಕೆ ಕಂಡು ಹಿಡಿಯುವವರೆಗೂ ಮಾಸ್ಕ್ ಬಳಕೆಯೇ ಲಸಿಕೆ ಎಂದು ತಿಳಿದುಕೊಳ್ಳಬೇಕು. ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳಲ್ಲಿ ಕಂಡು ಬರುತ್ತಿರುವ ಕಾಲುಬಾಯಿ ರೋಗದ ಸೋಂಕು ನಿಯಂತ್ರಿಸಲು ಲಸಿಕೆ ಹಾಕಲಾಗುತ್ತಿದೆ ಎಂದರು.

ಸಹಾಯಕ ಪೊಲೀಸ್ ಆಯುಕ್ತೆ ಅನುಷಾ, ತಹಶೀಲ್ದಾರ ಡಾ.ಸಂತೋಷ ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಪಾಟೀಲ, ಪಾಲಿಕೆಯ ವಲಯ ಸಹಾಯಕ ಆಯುಕ್ತ ಶ್ರೀನಿವಾಸ ಶಾಸ್ತ್ರಿ, ಆರ್.ಎಚ್. ಕುಲಕರ್ಣಿ, ಸರೋಜಾ ಪೂಜಾರ, ಮಹಾಂತೇಶ ಮ್ಯಾಗೇರಿ ಮತ್ತಿತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago