ಬಿಸಿ ಬಿಸಿ ಸುದ್ದಿ

ವಾಲ್ಮೀಕಿ ಸಮಾಜದ ಯುವತಿಯ ಅತ್ಯಾಚಾರ ಮಾನವೀಯತೆಯ ಕಗ್ಗೊಲೆ:ದ.ಸಂ.ಸ

ಜೇವರ್ಗಿ: ಉತ್ತರಪ್ರದೇಶದಲ್ಲಿ 19 ವರ್ಷದ ವಾಲ್ಮೀಕಿ ಸಮಾಯುವತಿಯಾದ ದಲಿತ ಯುವತಿಯಾದ  ಕಾಮುಕ ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮಾನವೀಯತೆಯ ಕಗ್ಗೊಲೆಯಾಗಿದೆ ಎಂದು ಖಂಡಿಸುತ್ತಾ ದಲಿತ ಸಂಘರ್ಷ ಸಮಿತಿ ಉತ್ತರ ಪ್ರದೇಶದ ಸರಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜೇವರ್ಗಿ ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರಸಲ್ಲಿಸಿದೆ.

ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ಸಂಘರ್ಷ ಸಮಿತಿಯ ಜಂಟಿಯಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಆದಿತ್ಯನಾಥ ಆಡಳಿತವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡು ಮಹಿಳೆಯರ ಮೇಲೆ ಶೋಷಣೆ ನಡೆಸುತ್ತಿರುವುದು, ಪ್ರಧಾನಿಗಳು ಹಾಗೂ ಆಡಳಿತ ವ್ಯವಸ್ಥೆ ಕಂಡು ಕಾಣದಂತೆ ಜಾಣ ಕುರುಡತನ ಯಾವ ಪುರುಷಾರ್ಥಕ್ಕಾಗಿ ? ಎಂದು ಪ್ರಶ್ನಿಸಿದರು.

ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಕಾಮುಕರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಕುಟುಂಬಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಿ ಪೊಲೀಸ್ ಭದ್ರತೆಯನ್ನು ಒದಗಿಸಬೇಕು .ಎಂದು ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ಸಂಘರ್ಷ ಸಮಿತಿ ತಾಲೂಕ ಶಾಖೆಯ ಜಂಟಿ ಪ್ರತಿಭಟನೆಯಲ್ಲಿ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು .

ಪ್ರತಿಭಟನೆ ಹೋರಾಟದ ನೇತೃತ್ವವನ್ನು ದಲಿತ ಸಂಘರ್ಷ ಸಮಿತಿಯ ತಾಲೂಕ ಸಂಚಾಲಕರಾದ ಸಿದ್ದರಾಮ ಕಟ್ಟಿ, ಸಂಘಟನಾ ಸಂಚಾಲಕರಾದ ಶಿವಕುಮಾರ ಹೆಗಡೆ, ಎಂ ಎಸ್ ಎಸ್ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಿಲ್ಲರ್, ಗೌರವ ಅಧ್ಯಕ್ಷ ಮಲ್ಲಪ್ಪ ನರಿಬೋಳ ,ಬಸವರಾಜ ಕಟ್ಟಿ, ಮರಪ್ಪ ಹೂತಿನ ಮಡು, ಶರಣಪ್ಪ ಆಂದೋಲ ,ಎಂ,ಎಸ್ ಎಸ್ ತಾಲೂಕ ಅಧ್ಯಕ್ಷರು , ಅಶೋಕ್ ನೆಲೋಗಿ ಶ್ರೀನಾಥ್ ಕಟ್ಟಿ ,ದೇವರಾಜ ಬಣಮಿ, ಹಿರಗಪ್ಪ ಹೊನ್ನಾಳ. ಮರಿಯಪ್ಪ ಜೇರಟಗಿ, ಸೂರ್ಯಕಾಂತ್ ಬಿರಾಳ, ಅಬ್ದುಲ್ ಘನಿ ಜೇವರ್ಗಿ, ಇತರ ಮುಖಂಡರು ಹಾಗೂ ನೂರಾರು ಜನ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದ್ದರು.

  • ರಾಜು ಮುದ್ದಡಗಿ
emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago