ಕಲಬುರಗಿ: ಕೋವಿಡ್ -19 ನಿಯಂತ್ರಣಕ್ಕಾಗಿ ಸರಕಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವದನ್ನು ಸ್ವಾಗತಿಸುತ್ತೇವೆ. ಆದರೇ ಇದೇ ಹೆಸರಲ್ಲಿ ಮಾಸ್ಕ್ ಧರಿಸದವರಿಗೆ , 1000 ಹಾಗೂ ಗ್ರಾಮೀಣ ಭಾಗದವರಿಗೆ 500 ದಂಡ ವಸೂಲಿ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಹೀಗಾಗಿ ಈ ಕ್ರಮವನ್ನು ಸರಕಾರ ಕೈ ಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ದ ಕಲಬುರಗಿ ತಾಲೂಕು ಅಧ್ಯಕ್ಷರಾದ ವಿಜಯಕುಮಾರ್ ಅಂಕಲಗಿ ರವರು ಸರಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಜ್ಯ ಸರಕಾರವು ಜಾರಿಗೆ ತಂದಿರುವ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಮಾಡಿರುವ ಕ್ರಮ ಒಳ್ಳೆಯದು. ಆದರೆ ಗ್ರಾಮೀಣ ಭಾಗದ ಜನತೆಗೆ ಇದು ತುಂಬಾ ತೊಂದರೆಯಾಗಿದೆ. ದೈನಂದಿನ ಚಟುವಟಿಕೆಗಳಿಗೆ ಹಳ್ಳಿಯಿಂದ ತಾಲೂಕು ಕೇಂದ್ರಕ್ಕೆ ಕೂಲಿ ಕೆಲಸಕ್ಕೆ ಬರುವುದು ಸಹಜ. ಕೂಲಿ ಮಾಡಿ ಮರಳಿ ಊರಿಗೆ ಹೋಗುವಾಗ ಪೋಲಿಸ್ ಇಲಾಖೆಯವರು ಮಾಸ್ಕ ಹಾಕದವರಿಗೆ 500 ರೂ.ದಂಡ ಕಟ್ಟಲೇಬೇಕು ಎಂದು ಒತ್ತಯಿಸುತ್ತಾರೆ.
ಅದರ ಆದೇಶ ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಗ್ರಾಮೀಣ ಪ್ರದೇಶದಿಂದ ಕಾಲ್ನಡಿಗೆಯಿಂದ ಹೋಗುತ್ತಿರುವ ಉದಾಹರಣೆ ಬಹಳವಾಗಿವೆ. ಒಂದು ದಿನ ಗ್ರಾಮೀಣ ಭಾಗದಲ್ಲಿ ದುಡಿದರೆ ಅವರಿಗೆ 400 ರೂ ಸಂಬಳ ಸಿಗುವ ಸಮಯದಲ್ಲಿ ಸರಕಾರದ ಆದೇಶದ ಪ್ರಕಾರ 500 ರೂ ಎಲ್ಲಿಂದ ಕಟ್ಟಬೇಕು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಹಾಗಾಗಿ ಈ ಕೂಡಲೇ ಈ ದಂಡ ವಸೂಲಿ ಕ್ರಮ ಕೈ ಬಿಟ್ಟು ಬೇರೆ ಸಂಘ ಸಂಸ್ಥೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಕೊರೊನಾ ಹರಡುವಿಕೆ ತಡೆಗೆ ಮುಂದಾಗಬೇಕು ಎಂದು ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…