20ನೇ ವರ್ಷದ ‘ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

0
37

ಕಲಬುರಗಿ: ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೦ ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ ೨2019-20ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಳೆದ 19 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 20 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ’ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರು ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲ್ಯೂಡಿ ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here