ಕಲಬುರಗಿ: ಬಿಜೆಪಿ ನಾಯಕರ ಬಗ್ಗೆ ಸಿದ್ದರಾಮಯ್ಯ ಏಕವಚನ ಪ್ರಯೋಗ ಸರಿಯಲ್ಲ, ಅವರ ಮಾತು ನಾಲಿಗೆಯ ಸಂಸ್ಕೃತಿ ಏನು ಅಂತಾ ತೋರಿಸುತ್ತದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಬೆಂಗಳೂರಿನಿಂದ ಕೆ.ಕೆ. ಎಕ್ಸ್‍ಪ್ರೆಸ್ ರೈಲು ಮೂಲಕ ನಗರಕ್ಕೆ ಆಗಮಿಸಿದ ಸಚಿವ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದು, ಬೈ ಎಲೆಕ್ಷನ್ನಲ್ಲಿ ಸೋಲುವ ಭೀತಿಯಿಂದ ಡಿಕೆಶಿ ನಿವಾಸದ ಮೇಲೆ ಬಿಜೆಪಿ ಸಿಬಿಐ ಅಸ್ತ್ರ ಪ್ರಯೋಗಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ ಮನೆ ಮೇಲೂ ಸಿಬಿಐ ದಾಳಿ ನಡೆದಿತ್ತು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರದಲ್ಲಿ ಯಡಿಯೂರಪ್ಪ ತನಿಖೆ ಎದುರಿಸಿ ನಿರಪರಾಧಿಯಾಗಿ ಹೊರ ಬಂದರು. ಅದರಂತೆ ಡಿಕೆಶಿ ನಿರಪರಾಧಿ ಎಂದು ಸಾಬೀತು ಪಡಿಸಲಿ ಎಂದು ಟಾಂಗ್ ಕೊಟ್ಟರು.
ಸಿಎಂ ಯೋಗಿ ಆದಿತ್ಯನಾಥ್, ತೇಜಸ್ವಿ ಸೂರ್ಯ ಬಗ್ಗೆ ಸಿದ್ದರಾಮಯ್ಯ ಆಡಿರುವ ಮಾತು ಗೊತ್ತಿದೆ. ಸಿದ್ಧರಾಮಯ್ಯ ವರ್ತನೆಯಿಂದ ಕಾಂಗ್ರೆಸ್ ನೆಲಕಚ್ಚಿದೆ ಎಂದು ಆರೋಪಿಸಿದ ಸಚಿವ, ಹೀಗೇ ವರ್ತನೆ ಮುಂದುವರಿದರೆ ಕಾಂಗ್ರೆಸ್ ನೆಲದಿಂದ ಕೆಳಗೆ ಹೋಗುತ್ತೆ ಎಂದು ಕಟ್ಟುವಾಗಿ ಟೀಕಿಸಿದರು.
ಈ ವೇಳೆಯಲ್ಲಿ ಶಿಕ್ಷಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ, ಕೆ,ಕೆ.ಆರ್.ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಸಿ ಪಾಟೀಲ್ ರೇವೂರ್, ಈಶಾನ್ಯ ಸಾರಿಗೆ ಇಲಾಖೆಯ ಅಧ್ಯಕ್ಷ ಶಾಸಕ ವಿಜಯ ಕುಮಾರ ತೆಲ್ಕೂರ್, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…