ಕೊಪ್ಪಳ: ಉತ್ತರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಹಾಗೂ ಸಂತ್ರಸ್ತೆಯ ಮನೆಗೆ ಭೇಟಿನೀಡುವ ವೇಳೆ ಬಂಧನಕ್ಕೊಳಗಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಕೋಶಾಧಿಕಾರಿ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಜಿಲ್ಲಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ನಗರದ ಅಶೋಕ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸಮಿತಿ ಸದಸ್ಯರಾದ ಹುಸೇನ್ ಭಾಷಾ ಮತ್ತು ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಅಫ್ಜಲ್, ಅತೀಕ್, ಇರ್ಫಾನ್, ಆವೇಜ್ ಹಾಗೂ ವಿದ್ಯಾರ್ಥಿಗಳು ಉಪಸ್ತಿತರಿದ್ದರು.