ಅನಧೀಕೃತವಾಗಿ ನೀರು ಸರಬರಾಜು ಮಾಡುತ್ತಿರುವ ನೀರಿನ ಘಟಕಗಳ ಮೇಲೆ ದಾಳಿ ನಡೆಸಿ ಜಪ್ತಿ

ಕಲಬುರಗಿ: ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ. ಶಿವಶರಣಪ್ಪಾ ಎಂ.ಡಿ ಭೂಸನೂರ ಹಾಗೂ ಸಿಬ್ಬಂದಿನ್ನೊಳಗೊಂಡ ತಂಡವು ಮಂಗಳವಾರ ಕಲಬುರಗಿ ನಗರದಲ್ಲಿ ಅನಧೀಕೃತವಾಗಿ ಸರಬರಾಜು ಮಾಡುತ್ತಿರುವ ನಾಲ್ಕು ನೀರಿನ ಘಟಕಗಳಿಗೆ ಅನಿರೀಕ್ಷಿತವಾಗಿ ದಾಳಿ ನಡೆಸಿ ಜಪ್ತಿ ಮಾಡಲಾಯಿತು.

ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಮತ್ತು 2011ರ ಅಡಿ ಜಿಲ್ಲೆಯಲ್ಲಿ ಪರವಾನಿಗೆ ಮತ್ತು ನೋಂದಣಿ ಮಾಡಿಕೊಳ್ಳದೇ ಅನಧಿಕೃತವಾಗಿ ನಡೆಸುತ್ತಿರುವ ನೀರಿನ ಘಟಕಗಳು ಮತ್ತು ಸರಬರಾಜು ಮಾಡುತ್ತಿರುವ ವಾಹನಗಳು ಸ್ವಯಂ ಪ್ರೇರಿತರಾಗಿ ನೀರಿನ ಘಟಕಗಳನ್ನು ಮುಚ್ಚಬೇಕು. ಅನಧಿಕೃತವಾಗಿ ಘಟಕಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹ ಘಟಕಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಐ.ಎಸ್.ಐ. ಪರವಾನಿಗೆ ಪಡೆದ ಘಟಕಗಳು ಒಂದು ವಾರದೊಳಗಾಗಿ ಎಲ್ಲಾ ಹಳೆಯ ಕ್ಯಾನ್‍ಗಳನ್ನು ಬದಲಿಸಿ ಹೊಸ ಕ್ಯಾನ್‍ಗಳನ್ನು ಉಪಯೋಗಿಸಬೇಕು. ಐ.ಎಸ್.ಐ., ಬಿ.ಎಸ್.ಐ. ದಿಂದ ಪಡೆದ ಪರವಾನಿಗೆ ಸಂಖ್ಯೆ ಮತ್ತು FSSAI ಪರವಾನಿಗೆ ಸಂಖ್ಯೆ ಹಾಗೂ ಚಿಹ್ನೆ ಹೊಂದಿದ ಹಾಗೂ ಆಚಿಣe oಜಿ Date of Manufacture, Best Before ಮತ್ತು ಸೀಲ್ಡ್ (Sealed Cover) ಮಾಡಿದ ಕ್ಯಾನ್‍ಗಳನ್ನು ಮಾತ್ರ ಸರಬರಾಜು ಮಾಡಬೇಕು.

ನೀರು ಸರಬರಾಜು ಮಾಡುವ ವಾಹನಗಳು ಈSSಂI ಪರವಾನಿಗೆ/ನೋಂದಣಿ ಮಾಡಿಸಿಕೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ-2006 ಮತ್ತು 2011 ರ ನಿಯಮದಡಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

1 hour ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

8 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

19 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420