ಕಲಬುರಗಿ: ಚಿಂಚೋಳಿಯ ಅಬಕಾರಿ ಇಲಾಖೆಯ ಅಧಿಕಾರಿಗಳು ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಗಸ್ತು ಮಾಡುತ್ತಿರುವಾಗ ಮನೆಯ ಮೇಲೆ ದಾಳಿ ನಡೆಸಿ 32 ಕೆ.ಜಿ ಗಂಜಾ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಭೀಮರೆಡ್ಡಿ ತಂದೆ ಅನಂತರೆಡ್ಡಿ ಇವರಿಗೆ ಸೇರಿದ ಮನೆಮೇಲೆ ದಾಳಿ ಮಾಡಲಾಗಿ ಮನೆಯ ಕಾಂಪೋಂಡ್ ಒಳಗಡೆ ಸುಮಾರು 140000 ರೂಪಾಯಿಗಳ 25 ಗಾಂಜಾ ಗಿಡಗಳು ಒಟ್ಟು 32 ಕೆಜಿ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ.
ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಅಬಕಾರಿ ಇಲಾಖೆಯ ಜಂಟಿ ಆಯುಕ್ತರು(ಜಾರಿ ಮತ್ತು ತನಿಖೆ) ನಿರ್ದೇಶನದಂತೆ ದಾಳಿಯಲ್ಲಿ ಅಬಕಾರಿ ಇಲಾಖೆಯ ಎಸ್ಪಿ ಸಂಗನಗೌಡ ಹೊಸಳ್ಳಿ, ಡಿಎಸ್ಪಿ ವಿಜಯಕುಮಾರ ರಾಮಪೂರೆ, ಚಿಂಚೋಳಿಯ ತಹಶೀಲ್ದರಾದ ಅರುಣಕುಮಾರ ಕುಲಕರ್ಣಿ, ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ಹನಗಂಡಿ, ಸಬ್ ಇನ್ಸ್ಪೆಕ್ಟರ ರಮೇಶ ಬಿರಾದರ ಸೇರಿ ಅಬಕಾರಿ ಸಿಬ್ಬಂದಿಗಳು ದಾಳಿಯಲ್ಲಿ ಇದ್ದರು.
ಚಿಂಚೋಳಿಯ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿಿದ್ದು, ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…