ಸಂಗೀತದಿಂದ ಮಾನಸಿಕ ನೆಮ್ಮದಿ: ರಾಜಾ ಹನಮಪ್ಪ ನಾಯಕ

ಸುರಪುರ: ಮನುಷ್ಯ ಸಂಗೀತವನ್ನು ಆಲಿಸುವುದರಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ ಹಾಗು ಮನುಷ್ಯನ ಚಿಂತನೆಯು ಉತ್ತಮದಾಗಿರಲಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ಮಾತನಾಡಿದರು.

ನಗರದ ಬಡಿಗೇರ ಬಾವಿ ಬಳಿಯ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಖಾಸ್ಗತೇಶ್ವರ ನೃತ್ಯ ಸಂಗೀತ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಸಂಗೀತ ಮತ್ತು ನೃತ್ಯವನ್ನು ಕಲಿಸುವತ್ತ ಗಮನಹಸಿಸಬೇಕು ಇದರಿಂದ ಮಕ್ಕಳಲ್ಲಿ ಒಳ್ಳೆಯ ಪ್ರತಿಭೆಯೊಂದಿಗೆ ಉತ್ತಮ ಸಂಸ್ಕಾರವು ಬೆಳೆಯಲಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದ ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ವಿರಕ್ತಮಠದ ಶ್ರೀ ಸಂಗಯ್ಯ ಸ್ವಾಮೀಜಿ ಮಾತನಾಡಿ,ಮಕ್ಕಳಿಗೆ ಭರತನಾಟ್ಯ ಕಥಕಳಿ ತಂಜಾವು ಜೊತೆಗೆ ಸಂಗೀತವನ್ನು ಕಲಿಸುವುದರಿಂದ ಮಕ್ಕಳ ಮಾನಸಿಕ ಬೆಳವಣಿಗೆಗೆ ಬಹಳ ಸಹಕಾರಿಯಾಗಲಿದೆ.ಗಾಯನ ವಾದನ ಮತ್ತು ನೃತ್ ಸೇರಿ ಸಂಗೀತವಾಗಿರುವುದರಿಂದ ಮಕ್ಕಳಿಗೆ ಇವೆಲ್ಲವು ಬಹಳ ಅವಶ್ಯಕವಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಭೀಮಾಶಂಕರ ಬಿಲ್ಲವ್ ಗೃಹರಕ್ಷಕ ದಳದ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಕಲ್ ಮಾತನಾಡಿದರು,ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ ಕೆ.ಅರವಿಂದ ರಂಗಭೂಮಿ ಕಲಾವಿದ ಕಲ್ಯಾಣಿ ಭಜಂತ್ರಿ ಮಾನಯ್ಯ ಪತ್ತಾರ ಚನ್ನಪಟ್ಟಣ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಘವೇಂದ್ರ ಭಕ್ರಿ ಬಸವರಾಜ ಮುಷ್ಠಳ್ಳಿ ನಾಗಪ್ಪ ಕೃಷ್ಣಗೌಡ ಸೇರಿದಂತೆ ಅನೇಕ ಜನ ಸಂಗೀತ ವಿದ್ಯಾರ್ಥಿಗಳಿದ್ದರು.ಉಪನ್ಯಾಸಕ ವೆಂಕಟೇಶ ಎಮ್.ಪಾಟೀಲ್ ನಿರೂಪಿಸಿದರು,ಶಿಕ್ಷಕ ಮಹಾಂತೇಶ ಹಿರೇಮಠ ಸ್ವಾಗತಿಸಿದರು ಸಂಸ್ಥೆಯ ಸಂಚಾಲಕ ಅನಿಲ್ ಕುಮಾರ ಜಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು ಅಯ್ಯಪ್ಪ ತಳವಾರ ವಂದಿಸಿದರು.

sajidpress

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

11 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

11 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

11 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

12 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

12 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420