ಸುರಪುರ: ಕೇಂದ್ರ ಸಚಿವ ರಾಮವಿಲಾಸ್ ಪಾಸ್ವನ್ ನಿಧನಕ್ಕೆ ಸುರಪುರದ ದಲಿತ ಸೇನೆ ತಾಲೂಕು ಘಟಕದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.ನಗರದ ಗೋಲ್ಡನ್ ಕೇವ್ ಗವಿ ಬುದ್ಧ ವಿಹಾರದಲ್ಲಿ ಸಭೆ ನಡೆಸಿದ ದಲಿತ ಸೇನೆ ಮುಖಂಡರು ರಾಮವಿಲಾಸ್ ಪಾಸ್ವನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು.
ನಂತರ ದಲಿತ ಸೇನೆ ತಾಲೂಕು ಅಧ್ಯಕ್ಷ ನಿಂಗಣ್ಣ ಗೋನಾಲ ಮಾತನಾಡಿ,ದಲಿತ ಸೇನೆಯ ಸ್ಥಾಪಕರಾಗಿದ್ದ ರಾಮವಿಲಾಸ್ ಪಾಸ್ವನ್ ಅವರ ನಿಧನ ದೇಶಕ್ಕೆ ಹಾಗು ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದರು.ಅವರು ದಲಿತ ಸೇನೆಯ ಮೂಲಕ ದೇಶದಲ್ಲಿನ ದಲಿತ ಸಮುದಾಯದ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ರೂಪಿಸಿದವರು.ಇಂದು ಅವರು ನಮ್ಮನ್ನೆಲ್ಲ ಬಿಟ್ಟು ಹೋಗಿರುವುದರಿಂದ ಅನಾಥ ಭಾವ ಕಾಡುತ್ತಿದೆ ಎಂದರು.
ಮಾಜಿ ನಗರಸಭೆ ಅಧ್ಯಕ್ಷ ಚಂದ್ರಶೇಖರ ಹಸನಾಪುರ ಮಾತನಾಡಿ,ದಲಿತರ ರಾಜಕೀಯ ಶಕ್ತಿಯಾಗಿ ಬೆಳೆದಿದ್ದ ರಾಮವಿಲಾಸ್ ಪಾಸ್ವನ್ ಅವರು ಕೇಂದ್ರ ಸಚಿವರಾಗಿ ಅನೇಕ ಜನಪರವಾದ ಕೆಲಸ ಮಾಡಿದವರು.ಅಲ್ಲದೆ ಎನ್‌ಡಿಎ ಸರಕಾರ ರಚನೆಯಲ್ಲಿ ಪಾತ್ರ ವಹಿಸಿದ್ದ ಪಾಸ್ವನ್ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ ಎಂದರು.
ಸಭೆಯಲ್ಲಿ ಹಣಮಂತ ಕುಂಬಾರಪೇಟೆ ಮಾನಪ್ಪ ಝಂಡದಕೇರಾ ಹುಲಗಪ್ಪ ದೇವತ್ಕಲ್ ನಾಗು ಗೋಗಿಕೇರಾ ಮದುಸೂಧನ ಬಸವರಾಜ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…