ಸುರಪುರ : ಲೋಕ ಜನಶಕ್ತಿ ಪಕ್ಷ ಕಟ್ಟಿ ದೇಶದಲ್ಲಿನ ದೀನ ದಲಿತರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿ ಎನ್‌ಡಿಎ ಸರಕಾರ ರಚನೆಯಲ್ಲಿ ತನ್ನದೆ ಆದ ಪಾತ್ರವಹಿಸಿದ್ದ ರಾಮವಿಲಾಸ್ ಪಾಸ್ವನ್ ಅವರ ನಿಧನದಿಂದ ದೇಶಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಮಾತನಾಡಿದರು.
ನಗರದ ಲೋಕ ಜನಶಕ್ತಿ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಪಾಸ್ವನ್‌ಜಿ ಅವರು ದೀನ ದಲಿತರ ಶಕ್ತಿಯಾಗಿದ್ದರು ಅವರನ್ನು ಕಳೆದುಕೊಂಡು ಲೋಕ ಜನಶಕ್ತಿ ಪಕ್ಷ ತನ್ನ ಶಕ್ತಿ ಕಳೆದುಕೊಂಡಂತಾಗಿದೆ ಎಂದು ನೋವು ವ್ಯಕ್ತಪಡಿಸಿದರು.
ಸಭೆಯ ಆರಂಭದಲ್ಲಿ ರಾಂವಿಲಾಸ್ ಪಾಸ್ವನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆಯೊಂದಿಗೆ ಸಂತಾಪ ಸೂಚಿಸಿದರು.ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾನಪ್ಪ ಮೇಲಿನಮನಿ ತಾಲೂಕು ಅಧ್ಯಕ್ಷ ಅಯ್ಯಾಳಪ್ಪ ಹೊನಕೇರಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…