ಶಿಕ್ಷಕರ ಕ್ಷೇತ್ರದ ಚುನಾವಣೆ: 3 ನಾಮಪತ್ರ ತಿರಸ್ಕøತ: 5 ನಾಮಪತ್ರ ಅಂಗೀಕಾರ

0
92

ಕಲಬುರಗಿ: ಅಕ್ಟೋಬರ್ 28 ರಂದು ನಡೆಯುವ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನಾ ಕಾರ್ಯ ಶುಕ್ರವಾರ ನಡೆದಿದ್ದು, ಒಟ್ಟು 5 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಗಳಾದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ಅವರು ತಿಳಿಸಿದ್ದಾರೆ.

ಜನತಾದಳ (ಜಾತ್ಯಾತೀತ) ಪಕ್ಷದಿಂದ ತಿಮ್ಮಯ್ಯಾ ಪುರ್ಲೆ, ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ ಪಕ್ಷದಿಂದ ಶರಣಪ್ಪ ಮಟ್ಟೂರು, ಭಾರತೀಯ ಜನತಾ ಪಕ್ಷದಿಂದ ಶಶೀಲ ನಮೋಶಿ, ಕನ್ನಡ ಚಳುವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಡಾ. ಚಂದ್ರಕಾಂತ ಸಿಂಗೆ ಅವರುಗಳ ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Contact Your\'s Advertisement; 9902492681

ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಅಕ್ಟೋಬರ್ 8ರ ಅಂತ್ಯಕ್ಕೆ ಒಟ್ಟು 8 ಅಭ್ಯರ್ಥಿಗಳಿಂದ 16 ನಾಮತ್ರಗಳು ಸಲ್ಲಿಕೆಯಾಗಿದ್ದವು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here