ಶಾಲೆ ಪ್ರಾರಂಭ ಸದ್ಯಕ್ಕಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

0
146

ಬೆಂಗಳೂರು: ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಭಾದಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು, ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆ೦ದು ಪೋಷಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಕೋವಿಡ್-19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ಸಹಿತ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ.

Contact Your\'s Advertisement; 9902492681

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಭಾದಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿ, ಈ ಕುರಿತು ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here