ಬಿಸಿ ಬಿಸಿ ಸುದ್ದಿ

ನಮೋಶಿ ಗೆಲುವಿಗೆ ಶ್ರಮಿಸಲು ಅಮರನಾಥ ಪಾಟೀಲ ಕರೆ

ಆಳಂದ: ಈಶಾನ್ಯ ಮತಕ್ಷೇತ್ರದ ಶಿಕ್ಷಕರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ ನಮೋಶಿ ಅವರ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಹೇಳಿದರು.
ಶನಿವಾರ ಆಳಂದ ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಬೂಥ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಜನತಾ ಪಕ್ಷವು ಶಿಕ್ಷಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಕೆಲಸ ಮಾಡಿದೆ ಈ ನಿಟ್ಟಿನಲ್ಲಿ ಎದುರಾದ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದೆ ಮುಂದೆಯೂ ಕೂಡ ಪಕ್ಷವು ಶಿಕ್ಷಕರ ಜೊತೆ ನಿಲ್ಲಲಿದೆ ಎಂದು ಭರವಸೆ ನೀಡಿದರು.

ಶಶೀಲ ನಮೋಶಿಯವರು ಈ ಹಿಂದೆ ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದಾಗ ಅನೇಕ ರಚನಾತ್ಮಕ ಕಾರ್ಯಗಳನ್ನು ಮಾಡಿದ್ದಾರೆ ಹೀಗಾಗಿ ಈ ಚುನಾವಣೆಯಲ್ಲಿ ಅವರನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತೀಯ ಜನತಾ ಪಕ್ಷದ ಬೇರುಗಳು ತಳಮಟ್ಟದಲ್ಲಿ ಬಲಿಷ್ಠವಾಗಿವೆ ಈ ಕಾರಣದಿಂದಾಗಿಯೇ ಹಲವು ವರ್ಷಗಳಿಂದ ಶಿಕ್ಷಕರ, ಪದವೀಧರ ಮತಕ್ಷೇತ್ರಗಳು ಬಿಜೆಪಿಯ ತೆಕ್ಕೆಯಲ್ಲಿದ್ದವು ಎಂದು ತಿಳಿಸಿದರು.

ಪ್ರ.ಕಾರ್ಯದರ್ಶಿ ಶರಣು ಕುಮಸಿ ನಿರೂಪಿಸಿದರು. ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೋರಳ್ಳಿ ಸ್ವಾಗತಿಸಿದರು. ಸುನೀಲ ಹಿರೋಳಿಕರ್ ವಂದಿಸಿದರು.

ಜಿಲ್ಲಾ ಪ್ರ. ಕಾರ್ಯದರ್ಶಿ ಅಶೋಕ ಬಗಲಿ, ಜಿ. ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ, ವಿದ್ಯಾಸಾಗರ ಕುಲಕರ್ಣಿ, ಹಣಮಂತರಾವ ಮಲಾಜಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತ ಪಾಟೀಲ ನಿಂಬಾಳ, ತಾ.ಪಂ ಉಪಾಧ್ಯಕ್ಷ ಗುರುನಾಥ ಪಾಟೀಲ, ಮುಖಂಡರಾದ ಮಲ್ಲಿಕಾರ್ಜುನ ಕಂದಗೂಳೆ, ಮಲ್ಲಣ್ಣ ನಾಗೂರೆ, ಮಹಿಬೂಬ್ ಆಳಂದ, ಅಶೋಕ ಗುತ್ತೇದಾರ, ಸಂಜಯ ಮಿಸ್ಕೀನ್, ಸಂತೋಷ ಹಾದಿಮನಿ, ಗೌರಿ ಚಿಚಕೋಟಿ, ಶ್ರೀಶೈಲ ಪಾಟೀಲ, ಸುಜ್ಞಾನಿ ಪೊದ್ದಾರ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಈ ಹಿಂದೆಯೂ ಶಶೀಲ ನಮೋಶಿಯವರಿಗೆ ಆಳಂದ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳು ದೊರತಿವೆ ಈ ಸಲವು ಹೆಚ್ಚಿನ ಮತಗಳನ್ನು ದೊರಕಿಸಿ ಕೊಡುವ ಮೂಲಕ ಅವರಿಗೆ ಗೆಲುವಿನ ಉಡುಗೊರೆ ನೀಡಲಾಗುವುದು- ಹರ್ಷಾನಂದ ಎಸ್ ಗುತ್ತೇದಾರ, ಜಿ.ಪಂ ಸದಸ್ಯರು, ಕಲಬುರಗಿ.
emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago