ಯುಪಿ ಸರಕಾರ ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

0
81

ಶಹಾಪುರ: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನಿಷಾಳ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಜೊತೆಗೆ ಬೇಜವಾಬ್ದಾರಿತನ ಹಾಗೂ ಉದ್ಧಟತನ ಪ್ರದರ್ಶಿಸುತ್ತಿರುವ ಯುಪಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳ ಮುಖಾಂತರ ಮಾನ್ಯ ಗೌರವಾನ್ವಿತ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ತಾಲ್ಲೂಕಿನ ಹತ್ತಿಗೂಡೂರ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದಲಿತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಲೇ ಇದೆ ಇದನ್ನು ನಾವು ಎಂದಿಗೂ ಸಹಿಸುವುದಿಲ್ಲ ಸುಮಾರು ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳು ಯೋಗಿಯ ಮೇಲಿವೆ ಇವರನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಬೇಕು ಎಂದು ದಲಿತ ಸಂಘಟನೆಯ ಮುಖಂಡರು ಒಕ್ಕೊರಲಿನಿಂದ ಹೇಳಿದರು.

Contact Your\'s Advertisement; 9902492681

ಹತ್ಯೆಗೊಳಗಾದ ಮಗಳ ಅಂತ್ಯ ಸಂಸ್ಕಾರಕ್ಕೂ ಅವಕಾಶ ಮಾಡಿಕೊಡದ ಯುಪಿ ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಯುಪಿಯಲ್ಲಿ ಸಂಪೂರ್ಣ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿ ಹೋಗಿದೆ.ಅಲ್ಲಿನ ಸರ್ಕಾರ ಮುಂದುವರಿಯುವುದಕ್ಕೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಮರೆಪ್ಪ ಮಮದಾಪುರ,ನಾಗಣ್ಣ ಬಡಿಗೇರ,ಶಿವಪುತ್ರ ಜವಳಿ, ಶರಣರೆಡ್ಡಿ ಹತ್ತಿಗೂಡೂರ, ಸತ್ಯನಾರಾಯಣ ದೊರಿ, ಪರಶುರಾಮ ತುಮಕೂರ, ಮಲ್ಕಣ್ಣ ಚಿಂತಿ,ನಿಂಗಣ್ಣ ಕರಡಿ, ಪರಶುರಾಮ ಹಯ್ಯಾಳ.ಕೆ ಶರಣು ಗ್ಯಾಂಗಿನ, ತಿಪ್ಪಣ್ಣ ತಳವಾರ,ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here