ಶಹಾಪುರ: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನಿಷಾಳ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಜೊತೆಗೆ ಬೇಜವಾಬ್ದಾರಿತನ ಹಾಗೂ ಉದ್ಧಟತನ ಪ್ರದರ್ಶಿಸುತ್ತಿರುವ ಯುಪಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳ ಮುಖಾಂತರ ಮಾನ್ಯ ಗೌರವಾನ್ವಿತ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ತಾಲ್ಲೂಕಿನ ಹತ್ತಿಗೂಡೂರ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದಲಿತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಲೇ ಇದೆ ಇದನ್ನು ನಾವು ಎಂದಿಗೂ ಸಹಿಸುವುದಿಲ್ಲ ಸುಮಾರು ಇಪ್ಪತ್ತಕ್ಕೂ ಹೆಚ್ಚು ಪ್ರಕರಣಗಳು ಯೋಗಿಯ ಮೇಲಿವೆ ಇವರನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಬೇಕು ಎಂದು ದಲಿತ ಸಂಘಟನೆಯ ಮುಖಂಡರು ಒಕ್ಕೊರಲಿನಿಂದ ಹೇಳಿದರು.
ಹತ್ಯೆಗೊಳಗಾದ ಮಗಳ ಅಂತ್ಯ ಸಂಸ್ಕಾರಕ್ಕೂ ಅವಕಾಶ ಮಾಡಿಕೊಡದ ಯುಪಿ ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಯುಪಿಯಲ್ಲಿ ಸಂಪೂರ್ಣ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗಿ ಹೋಗಿದೆ.ಅಲ್ಲಿನ ಸರ್ಕಾರ ಮುಂದುವರಿಯುವುದಕ್ಕೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಮರೆಪ್ಪ ಮಮದಾಪುರ,ನಾಗಣ್ಣ ಬಡಿಗೇರ,ಶಿವಪುತ್ರ ಜವಳಿ, ಶರಣರೆಡ್ಡಿ ಹತ್ತಿಗೂಡೂರ, ಸತ್ಯನಾರಾಯಣ ದೊರಿ, ಪರಶುರಾಮ ತುಮಕೂರ, ಮಲ್ಕಣ್ಣ ಚಿಂತಿ,ನಿಂಗಣ್ಣ ಕರಡಿ, ಪರಶುರಾಮ ಹಯ್ಯಾಳ.ಕೆ ಶರಣು ಗ್ಯಾಂಗಿನ, ತಿಪ್ಪಣ್ಣ ತಳವಾರ,ಹಾಗೂ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…