ಬಿಸಿ ಬಿಸಿ ಸುದ್ದಿ

ಶಹಾಬಾದ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಆಕಾಂಕ್ಷಿಗಳ ಪೈಪೋಟಿ

ಶಹಾಬಾದ:ಕಳೆದ ಎರಡು ವರ್ಷಗಳ ಬಳಿಕ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಇಲ್ಲಿನ ಶಹಾಬಾದ ನಗರಸಭೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪೈಪೋಟಿ ಶುರುವಾಗಿದೆ.

ಇಲ್ಲಿನ ಶಹಾಬಾದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮನ್ಯ ವರ್ಗಕ್ಕೆ ಮೀಸಲಾಗಿದೆ.ನಗರಸಭೆಯ ಒಟ್ಟು 27 ಸದಸ್ಯ ಸ್ಥಾನಗಳಲ್ಲಿ 18 ಕಾಂಗ್ರೆಸ್, 3 ಪಕ್ಷೇತರ ಸೇರಿಕೊಂಡು 21 ಸ್ಥಾನ, 5 ಬಿಜೆಪಿ ಸ್ಥಾನಗಳಲ್ಲಿ ಒಬ್ಬ ಸದಸ್ಯರ ಮರಣ ಹೊಂದಿದ್ದರಿಂದ ಸದಸ್ಯ ಬಲ 4 ಕ್ಕೆ ಇಳಿದಿದೆ. ಜೆಡಿಎಸ್-1 ಸ್ಥಾನ ಹೊಂದಿದ್ದು, ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಮಾತ್ರ ಶತಸಿದ್ಧ.

ಅಧಿಕಾರಕ್ಕೆ ಬರಲು ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ 5 ಮಹಿಳಾ ಸದಸ್ಯರಿದ್ದಾರೆ.ಅದರಲ್ಲಿ ನಾಲ್ಕು ಮಹಿಳಾ ಸದಸ್ಯರ ಹೆಸರು ಮಾತ್ರ ಕೇಳಿ ಬರುತ್ತಿದೆ. ವಾರ್ಡ ನಂ.6ರ ಚಂಪಾಬಾಯಿ ರಾಜು ಮೇಸ್ತ್ರಿ , ವಾರ್ಡ ನಂ.7ರ ಲಕ್ಷ್ಮಿಬಾಯಿ ವೆಂಕಟೇಶ ಕುಸಾಳೆ, ವಾರ್ಡ ನಂ.10ರ ಪೀರಮ್ಮ ಬಸಲಿಂಗಪ್ಪ ಪಗಲಾಪೂರ, ವಾರ್ಡ ನಂ.25ರ ಅಂಜಲಿ ಗಿರೀಶ ಕಂಬಾನೂರ ಅವರು ಪೈಪೋಟಿಯಲ್ಲಿದ್ದಾರೆ. ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹಾಗೂ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಯಾರ ಪರ ನಿರ್ಧಾರ ಕೈಗೊಳ್ಳಲಿದ್ದಾರೋ ಅವರೇ ನಗರಸಭೆಯ ಅಧ್ಯಕ್ಷ -ಉಪಾಧ್ಯಕ್ಷರಾಗುವುದು ಮಾತ್ರ ಖಚಿತ.

ಸತತವಾಗಿ ಮೂರು ಬಾರಿ ಗೆಲುವು ಸಾಧಿಸಿರುವ ಮತ್ತು ಎರಡು ಬಾರಿ ನಗರಸಭೆಯ ಉಪಾಧ್ಯಕ್ಷರಾಗಿರುವ ವಾರ್ಡ ನಂ. 7ರ ಸದಸ್ಯೆ ಲಕ್ಷ್ಮಿಬಾಯಿ ವೆಂಕಟೇಶ ಕುಸಾಳೆ ಅವರನ್ನು ಬಿಟ್ಟರೇ ಉಳಿದ ಮೂರು ಮಹಿಳಾ ಸದಸ್ಯರು ಪ್ರಥಮ ಬಾರಿ ಗೆಲುವು ಕಂಡವರು ಹಾಗೂ ನಗರಸಭೆಗೆ ಹೊಸಬರು.

ವಾರ್ಡ ನಂ. 6 ರ ಸದಸ್ಯೆ ಚಂಪಾಬಾಯಿ ರಾಜು ಮೇಸ್ತ್ರಿ ಅವರು ಪ್ರಥಮವಾಗಿ ಗೆದ್ದರೂ, ಅವರ ಪತಿ ಮೂರು ನಗರಸಭೆಯ ಮಾಜಿ ಸದಸ್ಯರಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಳಿಬರುತ್ತಿದೆ.

ವಾರ್ಡ ನಂ.10 ರ ಸದಸ್ಯೆ ಪೀರಮ್ಮ ಬಸಲಿಂಗಪ್ಪ ಅವರು ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಶರಣು ಪಗಲಾಪೂರ ಅವರ ತಾಯಿ.ಅವರು ತಮ್ಮ ತಾಯಿಯನ್ನು ಅಧ್ಯಕ್ಷ ಸ್ಥಾನದಲ್ಲಿ ನೋಡಲು ಎಲ್ಲಿಲ್ಲದ ಹರಸಾಹಸ ಪಡುತ್ತಿದ್ದಾರೆ.ಅಲ್ಲದೇ ಇಲ್ಲಯವರೆಗೆ ಮಾದಿಗ ಸಮಾಜದವರಿಗೆ ಪ್ರಾತಿನಿಧ್ಯ ನೀಡಿಲ್ಲವಾದ್ದರಿಂದ ಈ ಬಾರಿ ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ.

ವಾರ್ಡ ನಂ.25 ರ ಸದಸ್ಯೆ ಅಂಜಲಿ ಕಂಬಾನೂರ ಅವರು ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಅವರ ಪತ್ನಿ ಹಾಗೂ ಮಾಜಿ ಕಾರ್ಮಿಕ ಸಚಿವ ಸಿ.ಗುರುನಾಥ ಅವರ ಸೊಸೆ. ಅಲ್ಲದೇ ರಾಜಕೀಯ ಹಿನ್ನೆಲೆ ಹೊಂದಿದ ಕುಟುಂಬದ ಗಿರೀಶ ಕಂಬಾನೂರ ಅವರು ಅವರು ಈಗಾಗಲೇ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದು, ಈಗ ತಮ್ಮ ಪತ್ನಿಯನ್ನು ಅಧ್ಯಕ್ಷ ಸ್ಥಾನದ ನೀಡಿಸಲು ಮುಂದಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನ ಸಾಮನ್ಯ ವರ್ಗಕ್ಕೆ ಮೀಸಲಾಗಿದ್ದು, ಸೂರ್ಯಕಾಂತ ಕೋಬಾಳ, ಡಾ.ಅಹ್ಮದ್ ಪಟೇಲ್, ಇನಾಯತಖಾನ ಜಮಾದಾರ ಹಾಗೂ ಮಲ್ಲಿಕಾರ್ಜುನ ವಾಲಿ ಅವರ ಹೆಸರು ಕೇಳಿ ಬರುತ್ತಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ತಲಾ ನಾಲ್ಕು ಜನರ ಆಕಾಂಕ್ಷಿಗಳಲ್ಲಿ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

 

emedia line

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago