ಸುರಪುರ: ತಾಲೂಕಿನ ಸತ್ಯಂಪೇಟೆ ಗ್ರಾಮದ ಹೊರ ವಲಯದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು 25 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಸತ್ಯಂಪೇಟೆ ಗ್ರಾಮದ ಸಣ್ಣ ತಿಮ್ಮಣ್ಣ ಪುರ್ಲೆ ಎಂಬುವವರ 250 ಕುರಿಗಳಿದ್ದು ಅವುಗಳಲ್ಲಿ 25 ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಶನಿವಾರ ರಾತ್ರಿ ತುಂಬಾ ಮಳೆ ಬೀಳುತ್ತಿರುವಾಗ ಸತ್ಯಂಪೇಟೆ ಹೊರ ವಲಯದಲ್ಲಿ 250 ಕುರಿಗಳನ್ನು ದೊಡ್ಡಿಯಲ್ಲಿ ಹಾಕಿ ಸಣ್ಣ ತಿಮ್ಮಣ್ಣನವರ ಮಗನಾದ ಸಣ್ಣ ನರಸಪ್ಪ ಕುರಿ ದೊಡ್ಡಿಯ ಪಕ್ಕದಲ್ಲಿ ಮಲಗಿದ್ದು ರಾತ್ರಿ ಮಳೆಯ ಸಂದರ್ಭದಲ್ಲಿ ಸಿಡಿಲು ಬಿದ್ದು ಕುರಿಗಳು ಸಾವನಪ್ಪಿವೆ,ಆದರೆ ದೊಡ್ಡಿಯಿಂದ ಸ್ವಲ್ಪ ದೂರದಲ್ಲಿದ್ದ ಕುರಿಗಾಹಿ ಸಣ್ಣ ನರಸಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗು ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಸಾಲ ಮಾಡಿ ತಂದು ಕುರಿಗಳನ್ನು ಸಾಕಾಣಿಕೆ ಮಾಡುತ್ತಿದ್ದು ಈಗ ಏಕಾಎಕಿ 25 ಕುರಿಗಳು ಸತ್ತಿದ್ದರಿಂದ ದೊಡ್ಡ ನಷ್ಟವುಂಟಾಗಿದೆ ಸರಕಾರ ಪರಿಹಾರ ನೀಡಬೇಕೆಂದು ಸಣ್ಣ ತಿಮ್ಮಣ್ಣ ಪುರ್ಲೆ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…