ಸುರಪುರ: ನಗರದ ಉಸ್ತಾದ ಮಂಜಿಲ್‌ನಲ್ಲಿ ಲೋಕ ನಾಯಕ ಜಯಪ್ರಕಾಶ ನಾರಾಯಣ ಅವರ ಜನ್ಮ ದಿನವನ್ನು ಆಚರಿಸಲಾಯಿತು.ಮೊದಲಿಗೆ ಜಯಪ್ರಕಾಶ ನಾರಾಯಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ನಂತರ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ್ ವಜಾಹತ್ ಹುಸೇನ್ ಮಾತನಾಡಿ,ಜಯಪ್ರಕಾಶ ನಾರಾಯಣ ಅವರು ಈ ದೇಶ ಕಂಡ ಮಹಾನ್ ನಾಯಕರಲ್ಲಿ ಒಬ್ಬರು ಅವರು ಇಡೀ ದೇಶದಲ್ಲಿ ಹೊಸದೊಂದು ರಾಜಕೀಯ ಶಕ್ತಿಯನ್ನು ಹುಟ್ಟುಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.ಅಲ್ಲದೆ ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸಕ್ರೀಯವಾಗಿ ನಾವೆಲ್ಲರು ಕೆಲಸ ಮಾಡಿ ನಮ್ಮ ಪಕ್ಷದ ಅಭ್ಯಾರ್ಥಿಯಾದ ತಿಮ್ಮಯ್ಯ ಪುರ್ಲೆಯವರನ್ನು ಬೆಂಬಲಿಸೋಣ ಎಂದರು.
ನಂತರ ಮುಖಂಡ ಸಂಗಣ್ಣ ಬಾಕ್ಲಿ ಮಾತನಾಡಿ,ಜಯಪ್ರಕಾಶ ನಾರಾಯಣ ಅವರು ಸದಾಕಾಲ ಪ್ರಜಾಪ್ರಭುತ್ವದ ತಳಹದಿಯನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದರು.ಅಂದು ಜಾತ್ಯಾತೀತ ಎಲ್ಲಾ ನಾಯಕರನ್ನು ಒಂದುಗೂಡಿಸುವ ಮೂಲಕ ಮೊರಾರ್ಜಿ ದೇಸಾಯಿಯವರು ಪ್ರಧಾನಿಯಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೀರ್ತಿ ಜಯಪ್ರಕಾಶ ನಾರಾಯಣರಿಗೆ ಸಲ್ಲುತ್ತದೆ ಎಂದರು.
ನಾವೆಲ್ಲರು ಒಗ್ಗಟ್ಟಾಗಿ ನಮ್ಮ ಮತಕ್ಷೇತ್ರದ ಶಿಕಷಕರ ಬಳಿಗೆ ಹೋಗಿ ತಮ್ಮ ಮತವನ್ನು ಜೆಡಿಎಸ್ ಅಭ್ಯಾರ್ಥಿ ತಿಮ್ಮಯ್ಯ ಪುರ್ಲೆಯವರಿಗೆ ನೀಡುವಂತೆ ಮನವಿ ಮಾಡುವ ಮೂಲಕ ನಮ್ಮ ಅಭ್ಯಾರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡೋಣ ಎಂದರು.ಈ ಸಂದರ್ಭದಲ್ಲಿ ಶಾಂತು ತಳವಾರಗೇರಾ ಶೌಕತ್ ಅಲಿ ಎಮ್.ಡಿ ಬಾಬಾ ಅಲ್ತಾಪ್ ಸಗರಿ ಗೌಸ್ ನೌಕಾರ ವಿನಯ ಕಕ್ಕೇರಾ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…