ಶಹಾಬಾದ:ತಾಲೂಕಿನಲ್ಲಿ ಸರಕಾರಿ ನೌಕರರ ಸಂಘದ ಭವನದ ನಿರ್ಮಾಣಕ್ಕೆ ಜಾಗವನ್ನು ನೀಡಬೇಕೆಂದು ಆಗ್ರಹಿಸಿ ತಾಲೂಕಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪತಹಸೀಲ್ದಾರ ಮಲ್ಲಿಕಾರ್ಜುನರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ, ಶಹಾಬಾದ ನೂತನ ತಾಲೂಕು ರಚನೆಯಾದ ನಂತರ ಸರಕಾರಿ ನೌಕರರ ಸಂಘದ ರಚನೆಯಾಗಿದೆ.ಕಳೆದ ಒಂದು ವರ್ಷದಿಂದ ಸಂಘದ ಕಾರ್ಯಚಟುವಟಿಕೆಗಳನ್ನು ಮಾಡಲು ಸ್ವಂತ ಜಾಗವಿಲ್ಲ.ಅಲ್ಲದೇ ಕಟ್ಟಡವಿಲ್ಲ.ಯಾವುದೇ ಕಾರ್ಯಕ್ರಮಗಳು, ಸಭೆಗಳನ್ನು ಮಾಡಬೇಕಾದರೆ ಸರಕಾರಿ ಶಾಲೆಯ ಖಾಲಿ ಇರುವ ಕೋಣೆಯಲ್ಲಿ ಮಾಡುವಂತ ಅನಿವಾರ್ಯತೆ ಎದುರಾಗಿದೆ.ಆದ್ದರಿಂದ ನಮ್ಮ ಸಂಘದ ಚಟುವಟಿಕೆಗಳನ್ನು ನಡೆಸಲು ಮತ್ತು ಕಟ್ಟಡ ನಿರ್ಮಾಣ ಮಾಡಲು ಎರಡು ಎಕರೆ ಜಾಗವನ್ನು ನೀಡಬೇಕೆಂದು ಮನವಿ ಮಾಡಿದರು.
ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕಾಂತ ಭರಣಿ, ಪ್ರಧಾನ ಕಾರ್ಯದರ್ಶಿ ಸಂಜಯ ರಾಠೋಡ,ಖಜಾಂಚಿ ರಮೇಶ ಕುಲಕಣರ್ಿ, ಸದಸ್ಯರಾದ ಡಾ.ಸಂಧ್ಯಾ ಕಾನೇಕರ, ಬಸವರಾಜ ಕೊಳಕೂರ, ಶಾಂತಮಲ್ಲ ಶಿವಭೋ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…