ಬಿಸಿ ಬಿಸಿ ಸುದ್ದಿ

ಜಯ ಕರ್ನಾಟಕ ಸಂಘಟನೆಯ ಮಾಲೂರು ತಾಲ್ಲೂಕು ಅಧ್ಯಕ್ಷ ದಿನೇಶ್ ಗೌಡ ಹುಟ್ಟುಹಬ್ಬ ಹಿನ್ನೆಲೆ ಮಾಸ್ಕ್ ವಿತರಣೆ

ಮಾಲೂರು: ತಾಲ್ಲೂಕಿನ ಜಯಕರ್ನಾಟಕ ಸಂಘಟನೆಯ ವತಿಯಿಂದ ತಾಲ್ಲೂಕು ಅಧ್ಯಕ್ಷರು, ತಾಲೂಕು ಸಮಾಜ ಸೇವಕರು ಹಾಗೂ ಯುವ ರಾಜಕೀಯ ಮುಖಂಡರು ಆದ ಕೆ.ದಿನೇಶ್ ಗೌಡ ರವರ ಹುಟ್ಟು ಹಬ್ಬವನ್ನ ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಜಯಕರ್ನಾಟಕ ಸಂಘಟನೆಯ ಕಛೇರಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ತಾಲ್ಲೂಕು ಅಧ್ಯಕ್ಷರ ಹುಟ್ಟು ಹಬ್ಬದ ಹಿನ್ನೆಲೆ ಜಯಕರ್ನಾಟಕ ಸಂಘಟನೆ ವತಿಯಿಂದ ಮಾಲೂರು ನಗರದಲ್ಲಿ ಸಾರ್ವಜನಿಕರಿಗೆ ಕೋವಿಡ್ 19 ಕೊರೊನ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಜೊತೆಗೆ ಸಾರ್ವಜನಿಕರರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಯಕರ್ನಾಟಕ ತಾಲ್ಲೂಕು ಅಧ್ಯಕ್ಷರಾದ ಕೆ. ದಿನೇಶ್ ಗೌಡರು ಮಾತನಾಡಿ ಇಂದು ನನ್ನ ಹುಟ್ಟು ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದಂತಹ ಎಲ್ಲರಿಗೂ ನಾನು ಚಿರಋಣಿಯಾಗಿದ್ದೇನೆ. ಇಂದು ಮಾಲೂರು ಪಟ್ಟಣದಲ್ಲಿ ಸಾರ್ವಜನಿಕರಿಗೆ ಕೊರೊನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ನಮ್ಮ ಜಯಕರ್ನಾಟಕ ಸಂಘಟನೆ ವತಿಯಿಂದ ಉಚಿತ ಮಾಸ್ಕ್ ಗಳನ್ನು ವಿತರಿಸಲಾಯಿತು ಎಂದರು.
ಈ ಕಾರ್ಯಕ್ರಮದಲ್ಲಿ ಮಾಲೂರಿನ ಶಾಸಕರಾದ ಕೆ.ವೈ. ನಂಜೇಗೌಡರು, ರಾಮೇಗೌಡರು, ಜಯಕರ್ನಾಟಕ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಕೆ. ದಿನೇಶ್ ಗೌಡರು, ಯುವ ಘಟಕ ಅಧ್ಯಕ್ಷರು ಪ್ರಶಾಂತ್ ಮತ್ತು ರಾಮಮೂರ್ತಿ, ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಶಶಿಕೀರ್ತಿ.ಎನ್ ಮತ್ತು   ಹರೀಶ್, ನಿಕೀಲ್, ಮುನಿರಾಜು, ದಿಲೀಪ್, ಪುನೀತ್, ಬಾನು ಇತರರು ಉಪಸ್ಥಿತರಿದ್ದರು.
emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago