ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಡೆಸಲು ಆಯೋಗ ಅಖಾಡ ಸಿದ್ಧಪಡಿಸಿದ್ದು, 2020ರ ಡಿಸೆಂಬರ್ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗ, ಸರ್ಕಾರಕ್ಕೆ ತಿಳಿಸಿದೆ.
ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಚುನಾವಣಾ ಆಯೋಗ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಚುನಾವಣೆಯನ್ನು ನಡೆಸಲು ಆಯೋಗ ಸಿದ್ಧವಾಗಿದೆ ಎನ್ನುವ ವಿಷಯವನ್ನು ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಗ್ರಾಮ ಪಂಚಾಯಿತಿ ಚುನಾವಣೆ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಚುನಾವಣೆ ಆಯೋಗ ಎಲ್ಲಾ ಸಿದ್ದತೆ ಮಾಡಿಕೊಂಡಿದೆ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
ರಾಜ್ಯದಲ್ಲಿ 2 ವಿಧಾನಸಭೆ ಉಪಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಗಳು ನಡೆಯುತ್ತವೆ. ಜೊತೆಗೆ ಬಿಹಾರ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಲಾಗಿದೆ ಅದೇ ರೀತಿ ರಾಜ್ಯದಲ್ಲೂ ಕೂಡ ಚುನಾವಣಾ ಆಯೋಗ ಗ್ರಾಮ ಪಂಚಾಯತಿ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಹೇಳಿದೆ.
ಅವಧಿ ಮುಗಿದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗಳು ಶೀಘ್ರವೇ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಆಯೋಗ ಮಾಡಿಕೊಂಡಿದ್ದೇವೆ ಎಂದು ಸರ್ಕಾರಕ್ಕೆ ತಿಳಿಸಿರುವ ಪತ್ರದಲ್ಲಿ ಈ ವಿಷಯವನ್ನು ಉಲ್ಲೇಖಿಸಿದೆ.
2021ರ ಮೇ-ಜೂನ್ ತಿಂಗಳಲ್ಲಿ ಜಿಲ್ಲಾ ತಾಲೂಕು ಪಂಚಾಯಿತಿಗಳ ಅವಧಿ ಮುಗಿಯಲಿದ್ದು ಚುನಾವಣೆ ನಡೆಸಲು ಆಯೋಗ ಸಿದ್ದತೆ ನಡೆಸುತ್ತಿದೆ. ಈ ನಡುವೆ ಸರ್ಕಾರ 50 ಹೊಸ ತಾಲೂಕುಗಳನ್ನು ರಚನೆ ಮಾಡಿರುವ ಹಿನ್ನೆಲೆಯಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಕಾರ್ಯವನ್ನು 2020 ರ ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
2021ರ ಮೇನಲ್ಲಿ 55 ಸ್ಥಳೀಯ ಸಂಸ್ಥೆಗಳ ಅವಧಿ ಮುಗಿಯಲಿದ್ದು ಅವುಗಳನ್ನು ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ . ಈ ಎಲ್ಲಾ ಬೆಳವಣಿಗೆಯ ನೆಲೆಯಲ್ಲಿ ವರ್ಷಾಂತ್ಯದ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ಣಗೊಳಿಸುವಂತೆ ಆಯೋಗ ಸರ್ಕಾರಕ್ಕೆ ತಿಳಿಸಿದೆ.