ಬಿಸಿ ಬಿಸಿ ಸುದ್ದಿ

ಮಾಸ್ಕ ಧರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಿ-ವೆಂಕನಗೌಡ ಪಾಟೀಲ

ಶಹಾಬಾದ:ನಾವು ಆರೋಗ್ಯ ಕಾಪಾಡುವುದರ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ.ಆದ್ದರಿಂದ ನಾವು ಮಾಸ್ಕ ಧರಿಸಬೇಕು.ಅಲ್ಲದೇ ಮತ್ತೊಬ್ಬರಿಗೂ ಮಾಸ್ಕ ಧರಿಸುವಂತೆ ತಿಳಿ ಹೇಳಬೇಕೆಂದು ಡಿವೈಎಸಪಿ ವೆಂಕನಗೌಡ ಪಾಟೀಲ ಹೇಳಿದರು.

ಅವರು ಮಂಗಳವಾರ ಪೊಲೀಸ್ ಇಲಾಖೆ ವತಿಯಿಂದ ನಗರದ ರೇಲ್ವೆ ನಿಲ್ದಾಣದಲ್ಲಿ ಆಯೋಜಿಸಲಾದ ಕೋವಿಡ್ -19 ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೊರೊನಾ ವೈರಸ್ ತಡೆಗಟ್ಟಲು ಪ್ರತಿಯೊಬ್ಬರೂ ಮಾಸ್ಕ ಧರಿಸಿಕೊಳ್ಳಿ. ಜನರಿಗೂ ತಿಳುವಳಿಕೆಯಿದ್ದರೂ ಸಾಮಾಜಿಕ ಅಂತರ, ಮಾಸ್ಕ ಧರಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.ಇದರಿಂದ ಕೊರೊನಾ ಆಹ್ವಾನಕ್ಕೆ ದಾರಿಯಾಗುತ್ತದೆ.ಆರೋಗ್ಯ ಭಾಗ್ಯಕ್ಕಿಂತ ದೊಡ್ಡ ಭಾಗ್ಯ ಇನ್ನೊಂದಿಲ್ಲ. ಆರೋಗ್ಯದಿಂದ ಇದ್ದಾಗ ಮಾತ್ರ ಮತ್ತೊಂದು ಮಾಡಲು ಸಾಧ್ಯ ಎಂಬ ಅರಿವು ಜನರು ಮನದಟ್ಟು ಮಾಡಿಕೊಳ್ಳಬೇಕೆಂದು ಹೇಳಿದರಲ್ಲದೇ, ಸಾಬೂನು ಹಾಗೂ ಹ್ಯಾಂಡ ವಾಶಗಳ ಮೂಲಕವೇ ಕೈ ತೊಳೆದುಕೊಳ್ಳಿ.ಸ್ಯಾನಿಟೈಜರ್ ಬಳಕೆ ಮಾಡಿ ಕೊರೊನಾ ವೈರಸನಿಂದ ದೂರವಿರಿ ಎಂದು ಹೇಳಿದರು.

ಪಿಐ ಅಮರೇಶ.ಬಿ ಮಾತನಾಡಿ, ಕೊರೊನಾ ರೋಗ ವ್ಯಾಪಕವಾಗಿ ಹರಡುತ್ತಿದೆ.ಈ ಬಗ್ಗೆ ಸಾರ್ವಜನಿಕರು ನಿರ್ಲಕ್ಷ್ಯ ತೋರದೇ ಆದಷ್ಟು ಎಚ್ಚರದಿಂದ ಇರಿ.ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ, ಸ್ಯಾನಿಟೈಜರ್ ಬಳಕೆ ಮಾಡಿ.ಎಲ್ಲೆಂದರಲ್ಲಿ ಗುಂಪು ಜನರಿರುವ ಸ್ಥಳದಲ್ಲಿ ಸೇರಬೇಡಿ.ಮನೆಯ ಹಿರಿಯ ಜೀವಿಗಳನ್ನು ಮನೆಯಿಂದ ಹೊರಗೆ ಕಳಿಸಬೇಡಿ.ಆಗಾಗ ರೋಗನಿರೋಧಕ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಕರೊನಾವನ್ನು ಹೊಡೆದೋಡಿಸಿ ಎಂದು ಹೇಳಿದರು.

ಪಿಎಸ್ಐ ತಿರುಮಲೇಶ ಮಾತನಾಡಿ, ಜಗತ್ತಿಗೆ ತಲ್ಲಣ ಮೂಡಿಸಿದ ಕರೊನಾ ಇಂದು ವ್ಯಾಪಕವಾಗಿ ಹರಡಿ ಅನೇಕ ಜನರು ಸಾವನಪ್ಪಿದ್ದಾರೆ.ಆದರೂ ಜನರಿಗೆ ಈ ಬಗ್ಗೆ ಗೊತ್ತಿದ್ದರೂ ಮಾಸ್ಕ ಧರಿಸದೇ ಹೊರಬರುತ್ತಾರೆ.ಇದರಿಂದ ತಮ್ಮ  ರೋಗ ಹರಡುವ ಸಾಧ್ಯತೆಯಿದೆ.ಅಲ್ಲದೇ ಸಮಾಜದ ಸ್ವಾಸ್ಥ್ಯ ಹದಗೆಡಲು ಕಾರಣವಾಗುತ್ತದೆ.ಅಂಗಡಿಯ ಮಾಲೀಕರು ಮಾಸ್ಕ ಹಾಕಿಕೊಂಡು ಹಾಗೂ ಸ್ಯಾನಿಟೈಜರ್ ಇಟ್ಟು ವ್ಯಾಪಾರ ಮಾಡಬೇಕು.ಆದರೂ ಅವರು ಮಾಸ್ಕ ಧರಿಸುತ್ತಿಲ್ಲ. ಆದ್ದರಿಂದ ಮಾಸ್ಕ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ.ದಂಡಕ್ಕಾಗಿ ಮಾಸ್ಕ ಧರಿಸಿಕೊಳ್ಳುವಂತ ಚಾಳಿ ಬೆಳೆಸಿಕೊಳ್ಳದೇ, ತಮ್ಮ ಹಾಗೂ ಸಮಾಜದ ಆರೋಗ್ಯ ಕಾಪಾಡಲು ಮಾಸ್ಕ ಧರಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರದ ಮುಖಂಡರು, ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

55 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago