ಜಿಲ್ಲೆಯಲ್ಲಿ ವ್ಯಾಪಕ ಮಳೆ: ಜಲಾಶಯಗಳಿಂದ ನದಿಗೆ ನೀರು ಬಿಡುಗಡೆ

0
68

ಕಲಬುರಗಿ: ಜಿಲ್ಲೆಯಾದ್ಯಂತ ಮಂಗಳವಾರ ತಡರಾತ್ರಿ ವ್ಯಾಪಕ ಮಳೆ ಸುರಿದ ಪರಿಣಾಮ ಜಿಲ್ಲೆಯ ಬಹುತೇಕ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ನದಿಗೆ ನೀರು ಹರಿಬಿಡಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಾಲಿಂಗೆ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 8 ಗಂಟೆಗೆ ಗಂಡೋರಿನಾಲಾ ಜಲಾಶಯಕ್ಕೆ ಒಳಹರಿವು 35000 ಕ್ಯುಸೆಕ್ ನೀರು ಇದ್ದು, 30000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಆಳಂದ ತಾಲೂಕಿನ ಅಮರ್ಜಾ ಜಲಾಶಯಕ್ಕೆ ಒಳಹರಿವು 15000 ಕ್ಯುಸೆಕ್ ನೀರು ಇದ್ದು, 13000 ಕ್ಯುಸೆಕ್ ನೀರನ್ನು ಬಿಡಲಾಗಿದೆ.

Contact Your\'s Advertisement; 9902492681

ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ಒಳಹರಿವು 70000 ಕ್ಯುಸೆಕ್ ನೀರು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಭೀಮಾ ನದಿಗೆ ಬಿಡಲಾಗಿದೆ. ಬೆಣ್ಣೆತೋರಾ ಜಲಾಶಯಕ್ಕೆ ಒಳಹರಿವು 80510 ಕ್ಯುಸೆಕ್ ಇದ್ದು, 59350 ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ.

ಲೋವರ್ ಮುಲ್ಲಾಮಾರಿ ಜಲಾಶಯಕ್ಕೆ 38500 ಕ್ಯುಸೆಕ್ ನೀರು ಒಳಹರಿವಿದ್ದು, 57000 ಕ್ಯುಸೆಕ್ ನೀರು ಹೊರಬಿಡಲಾಗಿದೆ. ಚಿಂಚೋಳಿ ತಾಲೂಕಿನ ಚಂದ್ರಮಪಳ್ಳಿ ಜಲಾಶಯದ ಒಳ ಹರಿವು 6395 ಕ್ಯುಸೆಕ್ ಇದ್ದರೆ, ಹೊರ ಹರಿವು 6125 ಕ್ಯುಸೆಕ್ ಇದೆ.

ಅಪ್ಪರ ಮುಲ್ಲಾಮಾರಿ ಜಲಾಶಯದಲ್ಲಿ 3020 ಕ್ಯುಸೆಕ್ ನೀರು ಒಳ ಹರಿವಿದ್ದು, ಅಷ್ಟೆ ಪ್ರಮಾಣದ ನೀರು ಹೊರ ಬಿಡಲಾಗಿದೆ. ಮುಂದಿನ 3-4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ನದಿ ಪಾತ್ರದ ಜನರು ನದಿ ಕಡೆಗೆ ಹೋಗಬಾರದು. ತಮ್ಮ ಜಾನುವಾರಗಳನ್ನು ಸಹ ನದಿ ದಂಡೆಗೆ‌ ಬಿಡದಂತೆ ಹಾಗೂ ತುಂಬಾ ಎಚ್ಚರಿಕೆಯಿಂದಿರುವಂತೆ ಜಗನ್ನಾಥ ಹಾಲಿಂಗೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here