ಕಲಬುರಗಿ: ರಾಷ್ರ್ಟೀಯ ಹಾಗೂ ರಾಜ್ಯ ಹವಾಮಾನ ಇಲಾಖೆ ಇವರ ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಿರಂತರವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರಿ ಗಾಳಿ ಮತ್ತು ಮಳೆಯಾಗುತ್ತಿರುವುದರಿಂದ ಮನ್ನೆಚ್ಚರಿಕೆ ಕ್ರಮಗಳು ತೆಗೆದುಕೊಳ್ಳಲು ನಿರ್ದೇಶನ ನೀಡಿರುತ್ತಾರೆ.
ಅದರಂತೆ ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಗಾಳಿ ಮತ್ತು ಮಳೆಯಾಗುತ್ತಿರುವುದರಿಂದ ವಿಶೇಷವಾಗಿ ರೈತರು ಹಾಗೂ ಸಾರ್ವಜನಿಕರು ಮನೆಯಿಂದ ಅನಗತ್ಯವಾಗಿ ಹೊರಗಡೆ ಓಡಾಡದಿರುವಂತೆ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಅಂಬಾರಾಯ ಅಷ್ಠಗಿ ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಶೀಘ್ರದಲ್ಲಿ ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ನೀರು ಹರಿದು ಬರುವ ಸಾಧ್ಯತೆ ಇರುತ್ತದೆ, ಆದ್ದರಿಂದ ನದಿ ಪಾತ್ರದ ಹಾಗೂ ಹಳ್ಳದ ದಡದ ಹತ್ತಿರ ರೈತರು ತಮ್ಮ ಜಾನುವಾರುಗಳನ್ನು ತೆಗೆದುಕೊಂಡು ಹೋಗದಂತೆ ಎಚ್ಚರವಹಿಸಬೇಕೆಂದು ಹಾಗೂ ಕೊರೋನಾ ವೈರಸ್ ಹರಡುವಿಕೆಯನ್ನು ಈ ಸಂದರ್ಭದಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಅಂಬಾರಾಯ ಅಷ್ಠಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ..