ಪ್ರವಾಹ ನಿಯಂತ್ರಣಕ್ಕೆ ಶಾಸಕ ಗುತ್ತೇದಾರ ಅಧಿಕಾರಿಗಳ ಸಭೆ

1
87

ಕಲಬುರಗಿ: ತಾಲೂಕಿನಲ್ಲಿ ತಲೆದೂರಿರುವ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೆದಾರ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಆಳಂದ ತಾಲೂಕಿನಲ್ಲಿ ವಿಪರೀತವಾದ ಹಾನಿಯಾಗಿದೆ. ರೈತರು ಬೆಳೆದ ಸಾವಿರಾರು ಹೆಕ್ಟರ್ ಬೆಳೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ ಇಂತಹ ಸಂದರ್ಭದಲ್ಲಿ ಅಧಿಕಾರಿ ವರ್ಗ ಜನಸಾಮಾನ್ಯರ ಜೊತೆ ನಿಲ್ಲಬೇಕಾದುದ್ದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

Contact Your\'s Advertisement; 9902492681

ಸತತವಾಗಿ ಸುರಿದ ಮಳೆಯಿಂದ ಸಂಪರ್ಕ ರಸ್ತೆಗಳು, ಬ್ರಿಡ್ಜ್ ಕಂ ಬ್ಯಾರೇಜ್, ಶಾಲಾ ಕೋಣೆಗಳು, ಕೆರೆಗಳು, ಬಂಡಗಳು, ಬೆಳೆಗಳು ಹಾನಿಗೊಳಗಾಗಿವೆ. ಕಂದಾಯ ಇಲಾಖೆಯವರು ಸರಿಯಾದ ರೀತಿಯಲ್ಲಿ ಸಮೀಕ್ಷೆ ಮಾಡಿ ಹಾನಿಗೊಳಗಾದವರಿಗೆ ಪರಿಹಾರ ಒದಗಿಸಿಕೊಡಬೇಕು ಇದರಲ್ಲಿ ಯಾವುದೇ ಪಕ್ಷಪಾತ ಮಾಡಬಾರದು ಎಂದರು.

ಪಂಚಾಯತ ರಾಜ ಇಲಾಖೆ, ಅಗ್ನಿಶಾಮಕ ಇಲಾಖೆ, ಆರಕ್ಷಕ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಜನರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು ಮತ್ತು ಈ ಕುರಿತಂತೆ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ತಹಸೀಲ ಕಾರ್ಯಾಲಯದಲ್ಲಿ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರದಲ್ಲಿ ಪಾಳಿಯ ಮೇಲೆ ಕರ್ತವ್ಯಕ್ಕೆ ನಿಯೋಜಿಸುವಂತೆ ತಹಸೀಲದಾರರಿಗೆ ಸೂಚಿಸಿ, ಪ್ರತಿದಿನದ ವರದಿ ನೀಡಲು ಸೂಚಿಸಿದರು.

ಸಭೆಯಲ್ಲಿ ಪಂಚಾಯತ ರಾಜ ಇಲಾಖೆ, ಅಗ್ನಿಶಾಮಕ ಇಲಾಖೆ, ಆರಕ್ಷಕ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here