ಬಿಸಿ ಬಿಸಿ ಸುದ್ದಿ

ಗ್ರಾಮ ಸ್ಥಳಾಂತರಕ್ಕೆ ಕಂದಾಯ ಸಚಿವ ಆರ್.ಅಶೋಕ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಭೋಸಗಾ ಕೆರೆಯಿಂದ ಪ್ರವಾಹಕ್ಕೊಳಗಾದ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಕಂದಾಯ ಸಚಿವ ಅರ್.ಅಶೋಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ನೆರೆ ಪೀಡಿತ ಸೈಯದ್ ಚಿಂಚೋಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗ್ರಾಮ ಸ್ಥಳಾಂತರ ಸಂಬಂಧ ಗ್ರಾಮಕ್ಕೆ ಹತ್ತಿರದಲ್ಲಿಯೇ 11 ಎಕರೆ ಪ್ರದೇಶ ಗುರುತಿಸಲಾಗಿದೆ. ಗ್ರಾಮಸ್ಥರು ಒಪ್ಪಿದಲ್ಲಿ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಅಯುಕ್ತ ರಾಮಚಂದ್ರ ಗಡಾದೆ ಅವರಿಗೆ ಸಚಿವ ಆರ್. ಅಶೋಕ ಸೂಚಿಸಿದರು.

ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಮೂರು ಹೊತ್ತು ಊಟದ ಜೊತೆಗೆ ಮೊಟ್ಟೆ, ಮಲಗಲು ಹೊದಿಕೆ, ಟವೆಲ್, ಸ್ಯಾನಿಟೈಸ್ ನೀಡಬೇಕು. ಮಹಿಳೆಯರಿಗೆ ಸೀರೆ ಸಹ ನೀಡುವಂತೆ ಕಂದಾಯ ಸಚಿವ ಅರ್.ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ ಹಾಗೂ ಮುಂಬೈ ಕರ್ನಾಟಕದ ಬೆಳಗಾವಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕಳೆದ ಮೂರು ದಶಕದಲ್ಲಿ ಕಾಣದ ಭೀಕರ ಮಳೆ ಇದಾಗಿದ್ದು, ರಕ್ಷಣೆ ಕಾರ್ಯ ಕೈಗೊಳ್ಳಲು ಎನ್.ಡಿ.ಅರ್.ಎಫ್. ತಂಡಗಳನ್ನು ಈಗಾಗಲೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಕಳುಹಿಸಿದೆ. ರಾಜ್ಯದ ಒಟ್ಟು 173 ತಾಲೂಕುಗಳನ್ಬು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ನೆರೆ ಪರಿಹಾರ ಕಾರ್ಯ ಯುದ್ದೋಪಾದಿಯಲ್ಲಿ ಸಾಗಿದೆ. ಕಲಬುರಗಿ ಜಿಲ್ಲೆಯ 11 ತಾಲೂಕುಗಳು ಸಹ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಸೇರಿವೆ ಎಂದರು.

ಪ್ರಸ್ತುತ ರಾಜ್ಯದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಮತ್ತು ಸಂಪೂರ್ಣ ಮನೆ ಕುಸಿತ ಪ್ರಕರಣದಲ್ಲಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೀಡಲಾಗುತ್ತಿದೆ. ಮಳೆಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕೆ ಬೆಳೆಗಳ ಸಮೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ವರದಿಯಂತೆ ಪರಿಹಾರ ಧನ ವಿತರಿಸಲಾಗುವುದು. ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ಯಾವುದೇ ಅನುದಾನ ಕೊರತೆಯಿಲ್ಲ ಎಂದ ಅರ್. ಅಶೋಕ ಅವರು ಸ್ಪಷ್ಟಪಡಿಸಿದರು.

ಸೋಮಾರಿತನ ತೋರಿಸಿದಲ್ಲಿ ಮುಲಾಜಿಲ್ಲದೆ ಮನೆಗೆ ಕಳುಹಿಸಲಾಗುವುದು: ಕಲಬುರಗಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಪ್ರಸ್ತುತ 20.78 ಕೋಟಿ ರೂ. ಹಣವಿದೆ. ಯಾದಗಿರಿ ಡಿ.ಸಿ. ಖಾತೆಯಲ್ಲಿ 11 ಕೋಟಿ ರೂ. ಇದೆ. ಸಂತ್ರಸ್ತರ ರಕ್ಷಣೆಗೆ ಈ ಹಣ ಬಳಸುವಂತೆ ಜಿಲ್ಲಾಧಿಕರಿಗಳಿಗೆ ಸೂಚನೆ ನೀಡಲಾಗಿದೆ. ಪರಿಹಾರ ಕಾರ್ಯಕ್ಕೆ ಹಣದ ಕೊರತೆಯಿಲ್ಲ. ಇನ್ನೂ ಬೇಕಾದಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು. ಪ್ರಕೃತಿ ವಿಕೋಪದಂತ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಅರಿತು ಕೆಲಸ ಮಾಡಬೇಕು. ಕೆಲಸದಲ್ಲಿ ಸೋಮಾರಿತನ ಮಾಡುವ ಅಧಿಕಾರಿಗಳಿಗೆ ಮುಲಾಜಿಲ್ಲದೆ ಮನೆಗೆ ಕಳುಹಿಸಲಾಗುವುದು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಐದು ಪಟ್ಟು ಮಳೆ ಹೆಚ್ಚಳ, 3.31 ಲಕ್ಷ ಹೆಕ್ಟೇರ್ ಹಾನಿ: ಇತ್ತೀಚೆಗೆ ಸುರಿದ ಮಳೆಯಿಂದ ರಾಜ್ಯದಲ್ಲಿ 3.31 ಲಕ್ಷ ಹೆಕ್ಟೇರ್ ಕೃಷಿ ಬೆಳೆ, 32976 ತೋಟಗಾರಿಕೆ ಬೆಳೆ ಹಾಗೂ 38626 ಪ್ಲ್ಯಾಂಟೇಷನ್ ಬೆಳೆ ಹಾನಿಯಾಗಿದೆ. 1268 ಸೇತುವೆ ಕೆಟ್ಟು ಹೋಗಿವೆ. 10978 ಮನೆಗಳಿಗೆ ಹಾನಿಯಾಗಿದ್ದು, 360 ಕೆರೆ ಒಡೆದಿವೆ ಎಂದು ನೆರೆಯ ಹಾನಿಯ ಬಗ್ಗೆ ವಿವರಿಸಿದರು.

ರಾಷ್ಟ್ರೀಯ ವಿಪತ್ತು ಘೋಷಣೆಗೆ ಮನವಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂರು ದಶಕ ಕಂಡರಿಯದ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವಸ್ತ್ಯಗೊಂಡು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ವಿಪತ್ತು ಘೋಷಣೆಗೆ ಮತ್ತು ಕೇಂದ್ರ ಅಧ್ಯಯನ ತಂಡ ಕಳುಹಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಆರ್. ಅಶೋಕ ತಿಳಿಸಿದರು.

ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ, ಶಾಸಕರಾದ ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ ಸೇರಿದಂತೆ ಅಧಿಕಾರಿಗಳು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

53 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

55 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

58 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago